ಡಾ. ರಾಜ್‌ಕುಮಾರ್ ಮತ್ತು ಡಾ. ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ನಗರಸಭೆ ವಾರ್ಡ್. ೩ರ ವ್ಯಾಪ್ತಿಯ ಚಾಮೇಗೌಡ ಏರಿಯಾ ಡಾ. ರಾಜಕುಮಾರ್ ರಸ್ತೆ (ಬಿ.ಎಚ್ ರಸ್ತೆ), ನಗರಸಭೆ ಮಾರುಕಟ್ಟೆ ವಾಣಿಜ್ಯ ಸಂಕೀರ್ಣ ಬಳಿ ನಿರ್ಮಿಸಿರುವ ಡಾ. ರಾಜಕುಮಾರ್ ಮತ್ತು ಡಾ. ಪುನೀತ್ ರಾಜಕುಮಾರ್‌ರವರ ದೇಗುಲ ಹಾಗು ಕಂಚಿನ ಪ್ರತಿಮೆ ಲೋಕಾರ್ಪಣೆ ಜ.೨೨ರ ಗುರುವಾರ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಡಾ. ರಾಜ್‌ಕುಮಾರ್ ಮತ್ತು ಡಾ. ಪುನೀತ್ ರಾಜಕುಮಾರ್‌ರವರು ಚಿತ್ರರಂಗ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಸಲ್ಲಿಸಿರುವ ಕೊಡುಗೆ ಅನನ್ಯವಾಗಿದೆ. ಈ ಇಬ್ಬರು ಮಹಾನ್ ವ್ಯಕ್ತಿಗಳನ್ನು ನಾಡಿನ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇವರ ಹೆಸರಿನಲ್ಲಿ ಅಭಿಮಾನಿಗಳು ನಿರ್ಮಿಸಿರುವ ದೇಗುಲ ಹಾಗು ಕಂಚಿನ ಪ್ರತಿಮೆ ಲೋಕಾರ್ಪಣೆಗೊಳ್ಳುತ್ತಿರುವುದು ಸಂತಸದ ಸಂಗತಿ ಎಂದರು.

ಪುನೀತ್ ರಾಜ್‌ಕುಮಾರ್‌ರವರ ಪತ್ನಿ ಅಶ್ವಿನಿ ರಾಜಕುಮಾರ್‌ರವರು ದೇಗುಲ ಹಾಗೂ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಲಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ, ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಶಿಮೂಲ್ ಅಧ್ಯಕ್ಷ ವಿದ್ಯಾಧರ್, ಉಪಾಧ್ಯಕ್ಷ ಚೇತನ್ ಎಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಕುಮಾರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ ಮರಿಯಪ್ಪ, ನಿರ್ದೇಶಕ ಎಂ. ಶ್ರೀಕಾಂತ್, ತಹಸೀಲ್ದಾರ್ ಪರುಸಪ್ಪ ಕುರುಬರ, ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಈ ಭಾಗದ ನಗರಸಭೆ ಸದಸ್ಯ ಜಾರ್ಜ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಯುವ ಮುಖಂಡ ಬಿ.ಎಸ್ ಬಸವೇಶ್, ಡಾ. ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಬಿ.ಎಂ ಅರ್ಪಿತ್ ಕುಮಾರ್(ಅಪ್ಪು), ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಪೌರಾಯುಕ್ತ ಕೆ.ಎನ್ ಹೇಮಂತ್, ಮುಖಂಡ ಅಣ್ಣಾದೊರೈ, ಗುತ್ತಿಗೆದಾರ ಷರೀಫ್ ಹಾಗೂ ಕಾಂಗ್ರೆಸ್ ಪಕ್ಷದ ನಗರಸಭೆ ಎಲ್ಲಾ ಸದಸ್ಯರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಮಧ್ಯಾಹ್ನ ೧೨.೩೦ಕ್ಕೆ ಬೃಹತ್ ಅನ್ನಸಂತರ್ಪಣೆ ನಡೆಯಲಿದ್ದು, ಸಂಜೆ ೭ ಗಂಟೆಗೆ ಶ್ರೀ ರಾಜ್ ಮೆಲೋಡಿ ಮೇಕರ್ಸ್‌ ವತಿಯಿಂದ ಆರ್ಕೆಸ್ಟ್ರಾ ಕಾರ್ಯಕ್ರಮ ಜರುಗಲಿದೆ. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಕುಮಾರ್, ನಗರಸಭೆ ಸದಸ್ಯ ಜಾರ್ಜ್, ಸಂಘದ ಪದಾಧಿಕಾರಿಗಳಾದ ಅಧ್ಯಕ್ಷ ಬಿ.ಎಂ ಅರ್ಪಿತ್ ಕುಮಾರ್(ಅಪ್ಪು), ಉಪಾಧ್ಯಕ್ಷರಾದ ಜಿ.ಕೆ ದೇವೇಂದ್ರ(ದೇವ), ವೆಂಕಟೇಶ್, ಖಜಾಂಚಿ ಲಲಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಟಿ ರವಿಕುಮಾರ್, ಕಾರ್ಯದರ್ಶಿ ಎಲ್. ಶಂಕರ್, ಸಹ ಕಾರ್ಯದರ್ಶಿ ವೆಂಕಟೇಶ್, ಸದಸ್ಯರಾದ ಗೋಪಿ, ಭೂಮಿನಾಥನ್, ಮಹೇಶ್, ಎಲ್. ಶಂಕರ್, ಸುಮನ್, ಸುನೀಲ್, ರಕ್ಷಿತ್, ಅಮೋಘ, ಪ್ರಜ್ವಲ್, ನಿತಿನ್, ಮದನ್ ಮತ್ತು ಕೆ.ಸಿ ಮನು ಹಾಗು ಮುಖಂಡರಾದ ದಶರಥಗಿರಿ ಉಪಸ್ಥಿತರಿದ್ದರು.