ಡಾ.ಬಿ.ಆರ್. ಅಂಬೇಡ್ಕರ್ ಭಾರತದ ಹೆಮ್ಮೆಯ ಪುತ್ರ: ಟಿ.ಎಸ್.ಅನೂಪ್

| Published : Apr 15 2024, 01:25 AM IST

ಸಾರಾಂಶ

ಡಾ.ಬಿ.ಆರ್. ಅಂಬೇಡ್ಕರ್ ಭಾರತದ ಹೆಮ್ಮೆಯ ಪುತ್ರ, ರಾಷ್ಟ್ರ ಕಂಡ ಶ್ರೇಷ್ಠ ನಾಯಕರಲ್ಲಿ ಅವರು ಪ್ರಮುಖರು ಎಂದು ಶ್ರೀ ಪ್ರಹಷಿ೯ತ ವಿದ್ಯಾ ಸಂಸ್ಥೆ ಮುಖ್ಯ ಆಡಳಿತಾಧಿಕಾರಿ ಟಿ.ಎಸ್. ಅನೂಪ್ ಹೇಳಿದರು.

ಪಟ್ಟಣದ ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಆವರಣದಲ್ಲಿ ಡಾ,ಬಿ.ಆರ್. ಅಂಬೇಡ್ಕರ್ ಜನ್ಮದಿನ

ಕನ್ನಡಪ್ರಭ ವಾರ್ತೆ, ತರೀಕೆರೆ

ಡಾ.ಬಿ.ಆರ್. ಅಂಬೇಡ್ಕರ್ ಭಾರತದ ಹೆಮ್ಮೆಯ ಪುತ್ರ, ರಾಷ್ಟ್ರ ಕಂಡ ಶ್ರೇಷ್ಠ ನಾಯಕರಲ್ಲಿ ಅವರು ಪ್ರಮುಖರು ಎಂದು

ಶ್ರೀ ಪ್ರಹಷಿ೯ತ ವಿದ್ಯಾ ಸಂಸ್ಥೆ ಮುಖ್ಯ ಆಡಳಿತಾಧಿಕಾರಿ ಟಿ.ಎಸ್. ಅನೂಪ್ ಹೇಳಿದರು.ಪಟ್ಟಣದ ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆಯಿಂದ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ ಡಾ,ಬಿ.ಆರ್. ಅಂಬೇಡ್ಕರ್ ಜನ್ಮದಿನದಲ್ಲಿ ಭಾಗವಹಿಸಿ ಮಾತನಾಡಿ ಡಾ.ಬಿ,ಆರ್.ಅಂಬೇಡ್ಕರ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ. ಇವರ ತತ್ವ ಆದರ್ಶಗಳು ಸುಂದರ ಸಮಾಜವನ್ನು ನಿರ್ಮಿಸುವಂತಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಇವರ ಬೋಧನೆ ಗಳು, ಆದರ್ಶಗಳು ಸದಾ ಬದುಕಿನ ದಾರಿ ದೀಪ, ಬಾಬಾ ಸಾಹೇಬ್ ಪ್ರತಿಪಾದಿಸಿದ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಎತ್ತಿ ಹಿಡಿಯುತ್ತೇವೆಂದು ಹೇಳಿದರು. ಸಂಸ್ಥೆ ಮುಖ್ಯ ಶಿಕ್ಷಕಿ ವಿದ್ಯಾ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ವಿಚಾರಗಳು ಸದಾ ನಮಗೆಲ್ಲರಿಗೂ ಸ್ಪೂರ್ತಿ ,ಸಂವಿಧಾನ ಪ್ರತಿಯೊಬ್ಬ ಭಾರತೀಯರ ಪಾಲಿನ ಪವಿತ್ರ ಗ್ರಂಥ,1891ರ ಏಪ್ರಿಲ್14 ರಂದು ಮಧ್ಯಪ್ರದೇಶದ ಮಾಹೋ ಎಂಬಲ್ಲಿ ಡಾ,ಬಿ.ಆರ್. ಅಂಬೇಡ್ಕರ್ ಜನಿಸಿದ್ದರು. ಬಾಲ್ಯದಲ್ಲಿ ಸಾಕಷ್ಟು ಕಷ್ಟಗಳನ್ನು ಕಂಡಿದ್ದರು, ತಮ್ಮ ಛಲ ಸಾಧನೆಯ ಮೂಲಕ ಭವ್ಯ ಭಾರತದ ಕನಸು ಕಂಡಿದ್ದ ಅವರು ಅಪರೂಪದ ಮಹಾನ್ ಭಾರತೀಯ ನಾಯಕರ ಲ್ಲೊಬ್ಬರು. ವಿಶ್ವದಲ್ಲಿರುವ ಎಲ್ಲಾ ರಾಷ್ಟಗಳಿಗಿಂತ ನಮ್ಮ ದೇಶದ ಸಂವಿಧಾನ ವಿಶಿಷ್ಟ ಹಾಗೂ ಬೃಹತ್ ಸಂವಿಧಾನ ಎಂದು ಹೇಳಿದರು. ಸಂಸ್ಥೆಯ ಕಾಯ೯ದಶಿ೯ ಲೀಲಾಸೋಮಶೇಖರಯ್ಯ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಶುಭಾಶಯ ತಿಳಿಸಿದರು, ಶಿಕ್ಷಕಿಯರು ಉಪಸ್ಥಿತರಿದ್ದರು.

14ಕೆಟಿಆರ್.ಕೆ.01ಃ

ತರೀಕೆರೆಯಲ್ಲಿ ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮ ದಿನ ಸಮಾರಂಭವನ್ನು ಏರ್ಪಡಿಸಲಾಗಿತ್ತು.