ಕಾಂಗ್ರೆಸ್ ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರ ಆಧಾರ ಸ್ತಂಭಗಳಾಗಿವೆ, ಆದರೆ 75 ವರ್ಷಗಳಿಂದಲೂ ಸಹ ದಲಿತರಿಗೆ ಮುಖ್ಯಮಂತ್ರಿ ಆಗುವ ಅವಕಾಶ ದೊರಕಿಲ್ಲ,

ಕನ್ನಡಪ್ರಭ ವಾರ್ತೆ ನಂಜನಗೂಡು ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ನಂಜನಗೂಡಿನಲ್ಲಿ ಅವರ ಅಭಿಮಾನಿಗಳು ಪ್ರತಿಭಟಿಸಿದರು. ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಮುಂಭಾಗ ಡಾ.ಎಚ್.ಸಿ. ಮಹದೇವಪ್ಪ ಅಭಿಮಾನಿ ಬಳಗದ ಕಾಂಗ್ರೆಸ್ ಕಾರ್ಯಕರ್ತರು ನೂತನ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಮತ್ತು ಸಂಪುಟ ದರ್ಜೆ ಖಾತೆ ನೀಡುವಂತೆ ಆಗ್ರಹಿಸಿ ಘೋಷಣೆ ಕೂಗಿದರು. ಮುಖಂಡರಾದ ಮಹದೇವಪ್ಪ ಮಾತನಾಡಿ, ಕಾಂಗ್ರೆಸ್ ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರ ಆಧಾರ ಸ್ತಂಭಗಳಾಗಿವೆ, ಆದರೆ 75 ವರ್ಷಗಳಿಂದಲೂ ಸಹ ದಲಿತರಿಗೆ ಮುಖ್ಯಮಂತ್ರಿ ಆಗುವ ಅವಕಾಶ ದೊರಕಿಲ್ಲ, ಆದ್ದರಿಂದ ಹಿರಿಯ ದಲಿತ ನಾಯಕರಾಗಿರುವ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ, ದಲಿತ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಕುರುಬರ ಸಂಘದ ಮಾಜಿ ತಾಲೂಕು ಅಧ್ಯಕ್ಷ ಕೆಂಪಣ್ಣ, ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜು ಮಾತನಾಡಿದರು.ಶ್ರೀಕಂಠೇಶ್ವರ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಇಂದನ್ ಬಾಬು, ಜಿಪಂ ಮಾಜಿ ಸದಸ್ಯ ಕೆ.ಬಿ.ಸ್ವಾಮಿ, ಚೋಳರಾಜು, ನಗರ ಸಭೆ ಮಾಜಿ ಅಧ್ಯಕ್ಷ ಶ್ರೀಕಂಠಸ್ವಾಮಿ, ಶಶಿರೇಖಾ, ವಿಶ್ವಕರ್ಮ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ನಂದಕುಮಾರ್, ಮೃಗಾಲಯ ಪ್ರಾಧಿಕಾರ ಮಾಜಿ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಚ್.ಎಸ್. ಮೂಗಶೆಟ್ಟಿ, ಮುಖಂಡರಾದ ಎನ್‌.ಟಿ. ಗಿರೀಶ್, ಕುಳ್ಳಯ್ಯ, ಟಿ.ಎಲ್. ಮೋಹನ್ ಕುಮಾರ್, ಗುರುಪಾದು, ಗಿರಿಧರ್, ಸಿ.ಆರ್. ಮಹದೇವು ಇದ್ದರು.