ಡಾ. ಅಂಬೇಡ್ಕರ್ ತತ್ವ ಸಿದ್ಧಾಂತ ಜೀವನದಲ್ಲಿ ಅಳವಡಿಸಿಕೊಳ್ಳಿ: ದರ್ಶನ್

| Published : Apr 16 2024, 01:02 AM IST

ಡಾ. ಅಂಬೇಡ್ಕರ್ ತತ್ವ ಸಿದ್ಧಾಂತ ಜೀವನದಲ್ಲಿ ಅಳವಡಿಸಿಕೊಳ್ಳಿ: ದರ್ಶನ್
Share this Article
  • FB
  • TW
  • Linkdin
  • Email

ಸಾರಾಂಶ

ನಮ್ಮ ನಡುವೆ ಇಲ್ಲದೆ ಇದ್ದರೂ ಸಹ ಭಾರತ ದೇಶದ ಧರ್ಮ ಗ್ರಂಥ ಸಂವಿಧಾನ ನಮ್ಮ ಕಣ್ಣ ಮುಂದಿದೆ. ಈ ಸಂವಿಧಾನದ ನೆರಳಿನಲ್ಲಿ ಎಲ್ಲ ವರ್ಗದವರಿಗೂ ಸಮಾನ ಅವಕಾಶಗಳು ಲಭಿಸಿವೆ. ಆ ಸಂವಿಧಾನವನ್ನು ಸಂರಕ್ಷಣೆ ಮಾಡುವಂತಹ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದ್ದು. ಸಂವಿಧಾನಕ್ಕೆ ಧಕ್ಕೆಯಾದ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣೆಗೆ ಕಟೀಬದ್ದರಾಗಿರಬೇಕು

ಕನ್ನಡಪ್ರಭ ವಾರ್ತೆ ನಂಜನಗೂಡು

ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿಕೊಟ್ಟ ದಾರಿಯಲ್ಲಿ ಮುನ್ನಡೆಯಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ನಮ್ಮ ನಡುವೆ ಇಲ್ಲದೆ ಇದ್ದರೂ ಸಹ ಭಾರತ ದೇಶದ ಧರ್ಮ ಗ್ರಂಥ ಸಂವಿಧಾನ ನಮ್ಮ ಕಣ್ಣ ಮುಂದಿದೆ. ಈ ಸಂವಿಧಾನದ ನೆರಳಿನಲ್ಲಿ ಎಲ್ಲ ವರ್ಗದವರಿಗೂ ಸಮಾನ ಅವಕಾಶಗಳು ಲಭಿಸಿವೆ. ಆ ಸಂವಿಧಾನವನ್ನು ಸಂರಕ್ಷಣೆ ಮಾಡುವಂತಹ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದ್ದು. ಸಂವಿಧಾನಕ್ಕೆ ಧಕ್ಕೆಯಾದ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣೆಗೆ ಕಟೀಬದ್ದರಾಗಿರಬೇಕು ಎಂದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಪಂ ಮಾಜಿ ಸದಸ್ಯ ಕೆ. ಮಾರುತಿ, ಮುಖಂಡರಾದ ಮಹದೇವಪ್ಪ, ಇಂಧನ್ ಬಾಬು, ನಾಗೇಶ್ ರಾಜ್, ಎಂ.ಎನ್. ಮಂಜುನಾಥ್, ಶ್ರೀನಿವಾಸಮೂರ್ತಿ, ಮುದ್ದುಮಾದಶೆಟ್ಟಿ, ನಗರಸಭಾ ಸದಸ್ಯ ಪ್ರದೀಪ್ ಇದ್ದರು.