ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಡಾ.ಬಾಬು ಜಗಜೀವನರಾಂ ಅವರ 39ನೇ ಪುಣ್ಯ ಸ್ಮರಣೆಯನ್ನು ಆಚರಿಸಲಾಯಿತು.ತಾಲೂಕು ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ, ಜಗಜೀವನರಾಂ ಅವರು ಕೃಷಿ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿ ಹಸಿರು ಕ್ರಾಂತಿ ಹರಿಕಾರರಾಗಿದ್ದಾರೆ. ಕೃಷಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಸಾಕಷ್ಟು ಹೋರಾಡಿದರು ಎಂದರು.
ಸಮಾಜ ಕಲ್ಯಾಣ ಇಲಾಖಾಧಿಕಾರಿಗಳು ಜಗಜೀವನರಾಂ ಅವರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು. ಈ ವೇಳೆ ಚಾಮನಹಳ್ಳಿ ಮಂಜು, ರಾಚಯ್ಯ, ಅಹಿಂದ ಸಂರಕ್ಷಣಾ ವೇದಿಕೆ ಸಂಘಟನಾ ಕಾರ್ಯದರ್ಶಿ ಶಶಿಕುಮಾರ್, ದಸಂಸ ಆನಂದ್, ಶಿವರಾಜ್, ಮಹದೇವಯ್ಯ, ರಾಜೇಂದ್ರ ಸಿದ್ದರಾಜು, ವಿಜೇಂದ್ರ ಕುಮಾರ್, ಜಗದೀಶ್ ಅಂಬರಹಳ್ಳಿ ಸ್ವಾಮಿ ಭಾನು ಪ್ರಕಾಶ್, ಶ್ರೀನಿವಾಸ್ ಹಾಗೂ ಇತರರು ಇದ್ದರು.ಅರಣ್ಯ ಪ್ರದೇಶದಲ್ಲಿ 13 ರಂದು ಸಹಸ್ರ ಗಿಡ ನೆಡುವ ಅಭಿಯಾನ
ನಾಗಮಂಗಲ:ತಾಲೂಕಿನ ಅಂಕುಶಾಪುರ ಕಾಚೇನಹಳ್ಳಿ ಅರಣ್ಯ ಪ್ರದೇಶದಲ್ಲಿ ಜು.13ರಂದು ಬೆಂಗಳೂರಿನ ಮಾತೃ ಫೌಂಡೇಷನ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮಾತೃಗೊಂದು ಮರ ಸಹಸ್ರ ಸಹಸ್ರ ಗಿಡನೆಡುವ ಅಭಿಯಾನ-3 ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಅರಣ್ಯ ಇಲಾಖೆ, ತಾಲೂಕು ವಕೀಲರ ಸಂಘ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕಿನ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಘಟಕದ ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್, ಬಿ.ಎಂ.ಶ್ಯಾಂಪ್ರಸಾದ್, ಎಸ್.ರಾಚಯ್ಯ, ಟಿ.ಎಂ.ನದಾಫ್, ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ, ಬಿ.ವೀರಪ್ಪ, ರಾಜ್ಯ ಗ್ರಾಹಕ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಜಿ.ಟಿ.ಶಿವಶಂಕರೇಗೌಡ, ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಹಾಗೂ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರು ಪಾಲ್ಗೊಂಡು ಹಲವು ಬಗೆಯ ಸಸಿಗಳನ್ನು ನೆಟ್ಟು ನೀರೆರಯಲಿದ್ದಾರೆ.ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಜೆ.ಎನ್.ಸುಬ್ರಹ್ಮಣ್ಯ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಮೀನಾಕ್ಷಿ ನೇಗಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಜಿ.ವೈ.ರಾಜು, ಲೋಕಾಯುಕ್ತ ಉಪನಿಬಂಧಕ ಎನ್.ವಿ.ಅರವಿಂದ್, ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ್, ಕರ್ನಾಟಕ ಪಶ್ಚಿಮ ಘಟ್ಟಗಳ ಸಂರಕ್ಷಣಾ ಪಡೆ ಅಧ್ಯಕ್ಷ ಮಹಮ್ಮದ್ ತಬ್ರೇಜ್ ಅಲಂ ಶರೀಫ್, ರಾಜ್ಯ ಔಷಧಿ ಗಿಡಮೂಲಿಕೆ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಜೆ.ಪ್ರಭು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುವರು ಎಂದು ಮಾತೃ ಫೌಂಡೇಷನ್ ಅಧ್ಯಕ್ಷ ಹಾಗೂ ಹಿರಿಯ ವಕೀಲ ಆರ್.ಚಂದ್ರಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.