ಉಡುಪಿ: ಕೇರಳ ರಾಜ್ಯದ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಅಂಗವಾಗಿ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಣಿಪಾಲ ಎಂಐಟಿಯ ಪ್ರಾಧ್ಯಾಪಕ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರಿಗೆ ಪರಿಸರ ಪರ ಮತ್ತು ಸಮಾಜ ಸೇವಾ ಕಾರ್ಯಗಳನ್ನು ಗುರುತಿಸಿ ಶ್ರೀ ಬಿಕ್ಷು ಲಕ್ಷ್ಮಾನಂದ ಸ್ವಾಮೀಜಿ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು, ಗೋನಾಳದ ಶ್ರೀ ರಮೇಶ ಸ್ವಾಮೀಜಿ, ಸಮ್ಮೇಳನಾಧ್ಯಕ್ಷ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲು, ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಗೌರವಾಧ್ಯಕ್ಷ ಪ್ರದೀಪಕುಮಾರ ಕಲ್ಕೂರ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಕೆ.ಎನ್. ವೆಂಕಟರಮಣ ಹೊಳ್ಳ, ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಮುಂತಾದವರು ಉಪಸ್ಥಿತರಿದ್ದರು.