ಮಾಜಿ ಸಚಿವರು, ಶತಾಯಷಿ ಡಾ.ಭೀಮಣ್ಣ ಖಂಡ್ರೆ(102) ಅವರ ಆರೋಗ್ಯದಲ್ಲಿ ಮಂಗಳವಾರ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದೆ.
ಕನ್ನಡಪ್ರಭ ವಾರ್ತೆ ಭಾಲ್ಕಿ
ಮಾಜಿ ಸಚಿವರು, ಶತಾಯಷಿ ಡಾ.ಭೀಮಣ್ಣ ಖಂಡ್ರೆ(102) ಅವರ ಆರೋಗ್ಯದಲ್ಲಿ ಮಂಗಳವಾರ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದೆ.ಪಟ್ಟಣದ ಮನೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗುತ್ತಿದ್ದು, ಕಳೆದ ಎರಡ್ಮೂರು ದಿನಗಳಿಗೆ ಹೋಲಿಸಿದರೆ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಉಸಿರಾಟದ ಮಟ್ಟ ಏರಿಕೆಯಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವಿವಿಧ ಮಠಾಧೀಶರ ಭೇಟಿ :ಖಂಡ್ರೆ ನಿವಾಸಕ್ಕೆ ವಿವಿಧ ಮಠಾಧೀಶರು, ಗಣ್ಯರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಬೀದರಿನ ಸಿದ್ಧಾರೂಢ ಮಠದ ಶಿವಕುಮಾರ ಶ್ರೀಗಳು, ಗುರುಬಸವ ಪಟ್ಟದ್ದೇವರು, ಗದಗ ಜಿಲ್ಲೆಯ ಬಾಳೆ ಹೊಸೂರ ಮಠದ ದಿಂಗಾಲೇಶ್ವರ ಸ್ವಾಮೀಜಿ, ಹಾರಕೂಡದ ಚೆನ್ನವೀರ ಶಿವಾಚಾರ್ಯರು, ಮುಗುಳಖೋಡ ಶ್ರೀಗಳು, ಹುಡುಗಿ ಶ್ರೀಗಳು, ಹಣೆಗಾಂವ ಶ್ರೀಗಳು, ಹಾರಕೂಡ ಚೆನ್ನವೀರ ಶಿವಾಚಾರ್ಯರು, ಸೇರಿದಂತೆ ಅಫಜಲಪೂರ ಶಾಸಕ ಎಂ. ವೈ.ಪಾಟೀಲ್, ಹಿರಿಯ ಮುಖಂಡ ಗುರುನಾಥ ಕೊಳ್ಳುರು, ಡಿ.ಕೆ.ಸಿದ್ರಾಮ ಸೇರಿದಂತೆ ಮುಂತಾದವರು ಭೇಟಿ ನೀಡಿ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖ ಹೊಂದಲಿ ಎಂದು ಪ್ರಾರ್ಥಿಸಿದರು.
ಇನ್ನು, ಪುತ್ರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಬೀದರ್‌ನ ಗುದಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗು ತ್ತಿತ್ತು. ಆದರೆ ವೈದ್ಯರ ಸಲಹೆ ಮೇರೆಗೆ ನಾವು ಅವರನ್ನು ಭಾಲ್ಕಿಯ ನಮ್ಮ ಮನೆಯಲ್ಲಿಯೇ ಉತ್ತಮ ರೀತಿಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದೇಹದಲ್ಲಿ ಸುಧಾರಣೆಯಾಗುತ್ತಿದೆ. ಅವರ ಕೊನೆಯಾಸೆ ಮನೆಯಲ್ಲಿಯೇ ಕೊನೆ ಉಸಿರು ಎಳೆಯುವ ಸಂಕಲ್ಪವಿರಬಹುದು ಹಾಗಾಗಿ ಜಿಲ್ಲೆಯ ಎಲ್ಲ ತಾಲೂಕಿನ ಅವರ ಅಭಿಮಾನಿ ಬಳಗ ತಂಡೋಪ ತಂಡವಾಗಿ ಬಂದು ಅವರನ್ನು ಕಾಣುತ್ತಿದ್ದಾರೆ ಎಂದು ತಿಳಿಸಿದರು.---
ನಮ್ಮ ತಂದೆ ಶತಾಯಷಿ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಯಾರೂ ಕಿವಿಗೂಡಬಾರದು. ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನಮ್ಮ ತಂದೆಯ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಬೇಕು.ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ