ಸಾರಾಂಶ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಗೌರವಾಧ್ಯಕ್ಷ, ಲಕ್ಷ್ಮೀ ಎಜುಕೇಶನ್ ಟ್ರಸ್ಟ್‌ನ ಚೇರಮನ್ ಡಾ.ಭೀಮಶಿ ಜಾರಕಿಹೊಳಿ ಅವರ 57ನೇ ಜನುಮ ದಿನದ ಅಂಗವಾಗಿ ಅವರ ಅಭಿಮಾನಿಗಳು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಲಕ್ಷ್ಮೀ ಎಜುಕೇಶನ್ ಟ್ರಸ್ಟ್‌ನ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳು ಸೇರಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ಅನ್ನಸಂತರ್ಪಣೆ ಮಾಡಿದರು.
ಕನ್ನಡಪ್ರಭ ವಾರ್ತೆ ಗೋಕಾಕ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಗೌರವಾಧ್ಯಕ್ಷ, ಲಕ್ಷ್ಮೀ ಎಜುಕೇಶನ್ ಟ್ರಸ್ಟ್‌ನ ಚೇರಮನ್ ಡಾ.ಭೀಮಶಿ ಜಾರಕಿಹೊಳಿ ಅವರ 57ನೇ ಜನುಮ ದಿನದ ಅಂಗವಾಗಿ ಅವರ ಅಭಿಮಾನಿಗಳು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಲಕ್ಷ್ಮೀ ಎಜುಕೇಶನ್ ಟ್ರಸ್ಟ್‌ನ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳು ಸೇರಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ಅನ್ನಸಂತರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಲಕ್ಷ್ಮೀ ಎಜುಕೇಶನ್ ಟ್ರಸ್ಟ್‌ನ ಬಿ.ಕೆ.ಕುಲಕರ್ಣಿ, ಡಾ.ಎ.ಬಿ.ಪಾಟೀಲ, ಡಾ.ಜಿ.ಆರ್.ನಿಡೋಣಿ, ಐ.ಎಸ್.ಪವಾರ, ಅರುಣ ಪೂಜೇರ, ಎಚ್.ಎಸ್.ಅಡಿಬಟ್ಟಿ, ಎಚ್.ವಿ.ಪಾಗನಿಸ್, ಪಿ.ವಿ.ಚಚಡಿ, ಡಾ.ಶಾಂತ.ಪಿ, ಕಾರ್ಯನಿರತ ಪತ್ರಕರ್ತ ಸಂಘದ ಗುರು ಪೂಜೇರಿ, ಸುರೇಶ ಪಾಟೀಲ, ಮಹಾರುದ್ರ ಮಹಾಲಮನಿ, ಸಾದಿಕ ಹಲ್ಯಾಳ, ಲಕ್ಷ್ಮೀ ಪೆಟ್ರೋಲ್ ಸ್ಟೋರ್‌ನ ನಾಗರಾಜ್ ವಾಳವೇಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.