ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 14 ಅಡಿ ಕಂಚಿನ ಪ್ರತಿಮೆಯನ್ನು ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಲೋಕಾರ್ಪಣೆಗೊಳಿಸಿದರು. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ, ಇಂಧನ ಸಚಿವ ಕೆ.ಜೆ ಜಾರ್ಜ್, ಕಿಯೋನಿಕ್ಸ್‌ ಅಧ್ಯಕ್ಷ ಶರತ್ ಕುಮಾರ್ ಬಚ್ಚೇಗೌಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ ಸುಧಾಕರ್, ಶಾಸಕರಾದ ಧೀರಜ್‌ ಮುನಿರಾಜ್, ಶ್ರೀನಿವಾಸ್‌, ವಿಧಾನ ಪರಿಷತ್ ಸದಸ್ಯ ಎಸ್.ರವಿ ಸೇರಿದಂತೆ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.5ಕೆಡಿಬಿಪಿ1- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂದೆ ಸ್ಥಾಪಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕಂಚಿನ ಪ್ರತಿಮೆಯನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಲೋಕಾರ್ಪಣೆ ಮಾಡಿದರು.