ಗಾಂಧಿ ಜತೆ ಅಂಬೇಡ್ಕರ್‌ ಚಿತ್ರ ಕಡ್ಡಾಯ

| Published : Jun 21 2024, 01:09 AM IST

ಸಾರಾಂಶ

ರಾಜ್ಯದ ಸರ್ಕಾರಿ ಕಚೇರಿ, ಶಾಲಾ-ಕಾಲೇಜು ಸೇರಿದಂತೆ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂವಿಧಾನ ದಿನಾಚರಣೆ ಅಂಗವಾಗಿ ನಡೆಯುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲೂ ಮಹಾತ್ಮ ಗಾಂಧೀಜಿ ಭಾವಚಿತ್ರದ ಜತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರುರಾಜ್ಯದ ಸರ್ಕಾರಿ ಕಚೇರಿ, ಶಾಲಾ-ಕಾಲೇಜು ಸೇರಿದಂತೆ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂವಿಧಾನ ದಿನಾಚರಣೆ ಅಂಗವಾಗಿ ನಡೆಯುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲೂ ಮಹಾತ್ಮ ಗಾಂಧೀಜಿ ಭಾವಚಿತ್ರದ ಜತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಂಪುಟ ಸಭೆಯ ಬಳಿಕ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್‌ ಈ ವಿಷಯ ತಿಳಿಸಿದ್ದಾರೆ.