ಡಾ. ಚಂದ್ರಶೇಖರ ಗೆಲವು: ಕೊಪ್ಪಳದಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ

| Published : Jun 08 2024, 12:30 AM IST

ಸಾರಾಂಶ

ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಯಘೋಷ ಹಾಕಿ, ಸಿಹಿ ಹಂಚಿ ಸಂಭ್ರಮಿಸಿದರು.

ಕನ್ನಡಪ್ರಭ ವಾರ್ತೆ ಕೊಪ್ಪಳ

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಗೆಲವು ಸಾಧಿಸುತ್ತಿದ್ದಂತೆ ಕೊಪ್ಪಳ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಸಂಭ್ರಮಾಚರಣೆ ಮಾಡಿದರು.

ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಯಘೋಷ ಹಾಕಿ, ಸಿಹಿ ಹಂಚಿ ಸಂಭ್ರಮಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾರಡ್ಡಿ ಗಲಬಿ ಮಾತನಾಡಿ, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಗೆಲವು ಸಾಧಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿಯೂ ಡಾ. ಚಂದ್ರಶೇಖರ ಅವರ ಪರವಾಗಿ ಉತ್ತಮ ಮತಗಳು ಬಂದಿವೆ.

ಈಗಗಾಲೇ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಅವರು ಜಯ ಸಾಧಿಸಿರುವ ಬೆನ್ನಲ್ಲೇ ವಿಧಾನಪರಿಷತ್ ಚುನಾವಣೆಯಲ್ಲಿಯೂ ಈ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಗೆಲುವು ಸಾಧಿಸಿರುವುದು ಸಂತೋಷವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕಾಗಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಹಗಲಿರಳು ಶ್ರಮಿಸಿದ್ದಾರೆ ಎಂದರು.

ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ಕೃಷ್ಣಾ ಇಟ್ಟಂಗಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾರಡ್ಡಿ ಗಲಬಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಶಾ, ನಗರಸಭೆ ಸದಸ್ಯ ಅಮ್ಜಾದ್ ಪಟೇಲ್, ಗಾಳೆಪ್ಪ ಪೂಜಾರ, ಜ್ಯೋತಿ ಗೊಂಡಬಾಳ ಸೇರಿದಂತೆ ಅನೇಕರು ಇದ್ದರು.