ನೈಋತ್ಯ ಶಿಕ್ಷಕ, ಪದವೀಧರ ಕ್ಷೇತ್ರಕ್ಕೂ ನಾಮಪತ್ರ ಸಲ್ಲಿಕೆ

| Published : May 17 2024, 12:35 AM IST

ನೈಋತ್ಯ ಶಿಕ್ಷಕ, ಪದವೀಧರ ಕ್ಷೇತ್ರಕ್ಕೂ ನಾಮಪತ್ರ ಸಲ್ಲಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ರಘುಪತಿ ಭಟ್‌ ತಮ್ಮ ಬೆಂಬಲಿಗರೊಡನೆ ನಾಮಪತ್ರ ಸಲ್ಲಿಸಿದರು. ಬಿಜೆಪಿಯಿಂದ ಟಿಕೆಟ್‌ ಬಯಸಿದ್ದ ರಘುಪತಿ ಭಟ್‌ಅವರಿಗೆ ಟಿಕೆಟ್‌ ಕೈತಪ್ಪಿದ್ದರಿಂದ ಬಂಡಾಯವಾಗಿ ಉಮೇದುವಾರಿಕೆ

ಕನ್ನಡಪ್ರಭ ವಾರ್ತೆ ಮೈಸೂರು

ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಗೂ ಮೈಸೂರಿನಲ್ಲಿ ಗುರುವಾರ ನಾಮಪತ್ರ ಸಲ್ಲಿಕೆ ಆಯಿತು.

ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಗುರುವಾರ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌, ಸಂಸದ ಬಿ.ವೈ. ರಾಘವೇಂದ್ರ, ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಇದ್ದರು.

ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ರಘುಪತಿ ಭಟ್‌ ತಮ್ಮ ಬೆಂಬಲಿಗರೊಡನೆ ನಾಮಪತ್ರ ಸಲ್ಲಿಸಿದರು. ಬಿಜೆಪಿಯಿಂದ ಟಿಕೆಟ್‌ ಬಯಸಿದ್ದ ರಘುಪತಿ ಭಟ್‌ಅವರಿಗೆ ಟಿಕೆಟ್‌ ಕೈತಪ್ಪಿದ್ದರಿಂದ ಬಂಡಾಯವಾಗಿ ಉಮೇದುವಾರಿಕೆ ಸಲ್ಲಿಸಿದರು.

ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಕೆ. ಮಂಜುನಾಥ್ ಅವರು ಪಕ್ಷದ ನಾಯಕರ ಜತೆಗೂಡಿ ನಾಮಪತ್ರ ಸಲ್ಲಿಸಿದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್‌ಸೇಠ್‌ಮೊದಲಾದವರ ಜತೆಗೂಡಿ ಎರಡು ಸೆಟ್‌ ನಾಮಪತ್ರ ಸಲ್ಲಿಸಿದರು.

ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಸಿದರು. ಈ ವೇಳೆಯೂ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್‌ಸೇಠ್‌ ಮೊದಲಾದವರು ಜತೆಗಿದ್ದರು.