ಸಾರಾಂಶ
ಡಾ.ಧನಂಜಯ ಸರ್ಜಿ ಹಾಗೂ ಪತ್ನಿ ನಮಿತಾ ಸರ್ಜಿ ಜೊತೆ ಮಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರ ನೇತೃತ್ವದಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಪತ್ನಿ ನಮಿತಾ ಸರ್ಜಿ ಜೊತೆ ಮಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ಬಳಿಕ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರ ನೇತೃತ್ವದಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
ಪದವೀಧರ ಕ್ಷೇತ್ರದ ಸಂಚಾಲಕ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಿಕ್ಷಕರ ಕ್ಷೇತ್ರದ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಾ, ಸಹ ಸಂಚಾಲಕರಾದ ವಿಕಾಸ್ ಪುತ್ತೂರ್, ಡಾ.ಮಂಜುಳಾ ರಾವ್, ಹಿರಿಯರಾದ ಮೋನಪ್ಪ ಭಂಡಾರಿ, ಗಣೇಶ್ ಕಾರ್ಣೀಕ್, ಬಾಲಕೃಷ್ಣ ಭಟ್, ಸಂಜೀವ್ ಮಠಂದೂರ್ ಮತ್ತಿತರರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.