ಕನ್ನಡಪ್ರಭ ವಾರ್ತೆ ಕೊರಟಗೆರೆ
ಎರಡನೇ ಬಾರಿ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಕೆ.ಆರ್.ಓಬಳರಾಜು ಮಾತನಾಡಿ, ನಮ್ಮ ನಾಯಕರಾದ ಡಾ.ಜಿ.ಪರಮೇಶ್ವರ ಅವರ ಪ್ರಾಮಾಣಿಕವಾಗಿ ಪಕ್ಷದಲ್ಲಿ ದುಡಿದು ಇವತ್ತು ಅನೇಕ ಹುದ್ದೆಗಳನ್ನು ಅಲಂಕರಿಸಿ ಅನುಭವ ಹೊಂದಿರುವ ನಮ್ಮ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಕೊಡಬೇಕಿತ್ತು. ಡಿ.ಕೆ.ಶಿವಕುಮಾರ್ ಅವರ ಸರ್ಕಾರದಲ್ಲಿ ಎರಡನೇ ಬಾರಿಗೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವುದು ನಮಗೆಲ್ಲರಿಗೂ ಸಂತೋಷ ತಂದಿದೆ ಎಂದರು. ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಎಲ್.ರಾಜಣ್ಣ ಮಾತನಾಡಿ, ಡಾ.ಜಿ.ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿರುವುದನ್ನು ಕೊರಟಗೆರೆ ವಿಧಾನಸಭಾ ಕ್ಷೇತ್ರ ಮತ್ತು ತುಮಕೂರು ಜಿಲ್ಲೆ ಹಾಗೂ ರಾಜ್ಯದ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ, ಸಜ್ಜನ ರಾಜಕಾರಣಿಗಳಾದ ಡಾ.ಜಿ.ಪರಮೇಶ್ವರ ರವರು ಮುಂದೆ ಮುಖ್ಯಮಂತ್ರಿಯಾಗುವುದನ್ನು ನಾವೆಲ್ಲಾ ನೋಡಬೇಕು ಎಂದರು.ಪಪಂ ಮಾಜಿ ಉಪಾಧ್ಯಕ್ಷ ಕೆ.ವಿ.ಮಂಜುನಾಥ್ ಮಾತನಾಡಿ, ರಾಜ್ಯದ ದಲಿತ ನಾಯಕರು ಎಲ್ಲಾ ವರ್ಗಗಳ ಜನರ ಹತೈಷಿಗಳು ಸುಮಾರು ೪೦ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ರೀತಿ ಸೇವೆ ಮಾಡಿ, ೮ ವರ್ಷಗಳ ಕಾಲ ಕೆ.ಪಿಸಿ.ಸಿ ಅಧ್ಯಕ್ಷರಾಗಿ ದುಡಿದು ಈಗ ಕರ್ನಾಟಕ ಸರ್ಕಾರದಲ್ಲಿ ಎರಡನೇ ಬಾರಿ ಉಪಮುಖ್ಯಮಂತ್ರಿಯಾದ ಡಾ.ಜಿ.ಪರಮೇಶ್ವರ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲ್ಲಿದ್ದಾರೆ ಎಂದರು.ಈ ಸಂದರ್ಭದಲ್ಲಿ ಮುಖಂಡರಾದ ನಾಗಭೂಷಣ್, ಮಹೇಶ್, ಕೆ.ಬಿ.ಲೋಕೇಶ್, ಕೆ.ವಿ.ಪುರುಷೋತ್ತಮ್, ಕೆ.ಎಂ.ಸುರೇಶ್, ಕೆ.ಎಲ್.ಆನಂದ್, ವಿಶ್ವನಾಥ್, ಆನಂದ್, ದೀಪಕ್, ರಂಗನಾಥ್, ಅಶ್ವಥಪ್ಪ, ಶ್ಯಾಮ್, ಗೋವಿಂದರಾಜು, ಸೇರಿದಂತೆ ಹಲವರು ಹಾಜರಿದ್ದರು.ಡಾ. ಜಿ.ಪರಮೇಶ್ವರ ಡಿಸಿಎಂ: ಕೊರಟಗೆರೆಯಲ್ಲಿ ಸಂಭ್ರಮಾಚರಣೆ
ಎರಡನೇ ಬಾರಿ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.