ಸಾರಾಂಶ
೨೦೨೪ನೇ ಸಾಲಿನ ಡಾ.ಎಚ್.ಡಿ.ಚೌಡಯ್ಯ ಸಮಾಜ ಸೇವಾ ಪ್ರಶಸ್ತಿಯನ್ನು ಕೋಲಾರ ತಾಲೂಕು ಚಾಮರಹಳ್ಳಿಯ ಜೀವ ಸಂಜೀವನ ನ್ಯಾಚುರಲ್ ಲೈಫ್ ಸಂಸ್ಥಾಪಕ ಆರ್.ರಾಜಶೇಖರ್, ಗ್ರಾಮೀಣಾಭಿವೃದ್ಧಿ ಪ್ರಶಸ್ತಿಗೆ ಉಮ್ಮಡಹಳ್ಳಿ ಸರ್ಕಾರಿ ಪ್ರೌಢಶಾಲೆ, ಕೃಷಿ ಪ್ರಶಸ್ತಿಯನ್ನು ಮದ್ದೂರು ತಾಲೂಕು ಮಲ್ಲನಕುಪ್ಪೆ ಗ್ರಾಮದ ಶಿವರಾಮೇಗೌಡ ಅವರಿಗೆ ನೀಡಿ ಗೌರವಿಸಲಾಗುತ್ತಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಜನತಾ ಶಿಕ್ಷಣ ಟ್ರಸ್ಟ್ ವತಿಯಿಂದ ಡಾ.ಎಚ್.ಡಿ.ಚೌಡಯ್ಯನವರ ೯೭ನೇ ಜನ್ಮದಿನಾಚರಣೆ, ೨೦೨೪ನೇ ಸಾಲಿನ ರಾಜ್ಯ ಮಟ್ಟದ ಡಾ.ಎಚ್.ಡಿ.ಚೌಡಯ್ಯ ಸಮಾಜ ಸೇವೆ, ಗ್ರಾಮೀಣಾಭಿವೃದ್ಧಿ, ಕೃಷಿ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ವಿದ್ಯಾರ್ಥಿ ಪುರಸ್ಕಾರ ಸಮಾರಂಭ ಸೆ.೨೫ರಂದು ಬೆಳಗ್ಗೆ ೧೦.೩೦ಕ್ಕೆ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ಪ್ಲೇಸ್‌ಮೆಂಟ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಿಇಟಿ ನಿರ್ದೇಶಕ ಡಾ.ರಾಮಲಿಂಗಯ್ಯ ತಿಳಿಸಿದರು.ದಿವ್ಯ ಸಾನ್ನಿಧ್ಯ, ಉದ್ಘಾಟನೆ ಮತ್ತು ಪ್ರಶಸ್ತಿಯನ್ನು ಬೇಬಿಮಠದ ಪೀಠಾಧಿಪತಿ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ನೆರವೇರಿಸುವರು. ಅಧ್ಯಕ್ಷತೆಯನ್ನು ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ವಹಿಸುವರು. ಕಾರ್ಯದರ್ಶಿ ಎಸ್.ಎಲ್. ಶಿವಪ್ರಸಾದ್, ಧರ್ಮದರ್ಶಿ ಎಚ್.ಸಿ.ಮೋಹನ್‌ಕುಮಾರ್ ಉಪಸ್ಥಿತರಿರುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
೨೦೨೪ನೇ ಸಾಲಿನ ಡಾ.ಎಚ್.ಡಿ.ಚೌಡಯ್ಯ ಸಮಾಜ ಸೇವಾ ಪ್ರಶಸ್ತಿಯನ್ನು ಕೋಲಾರ ತಾಲೂಕು ಚಾಮರಹಳ್ಳಿಯ ಜೀವ ಸಂಜೀವನ ನ್ಯಾಚುರಲ್ ಲೈಫ್ ಸಂಸ್ಥಾಪಕ ಆರ್.ರಾಜಶೇಖರ್, ಗ್ರಾಮೀಣಾಭಿವೃದ್ಧಿ ಪ್ರಶಸ್ತಿಗೆ ಉಮ್ಮಡಹಳ್ಳಿ ಸರ್ಕಾರಿ ಪ್ರೌಢಶಾಲೆ, ಕೃಷಿ ಪ್ರಶಸ್ತಿಯನ್ನು ಮದ್ದೂರು ತಾಲೂಕು ಮಲ್ಲನಕುಪ್ಪೆ ಗ್ರಾಮದ ಶಿವರಾಮೇಗೌಡ ಅವರಿಗೆ ನೀಡಿ ಗೌರವಿಸಲಾಗುತ್ತಿದೆ ಎಂದು ವಿವರಿಸಿದರು.ಪ್ರತಿಭಾ ವಿದ್ಯಾರ್ಥಿ ಪ್ರಶಸ್ತಿಯನ್ನು ಹೊಳಲು ಸರ್ಕಾರಿ ಪ್ರೌಢಶಾಲೆಯ ಎಚ್.ಕೆ.ಸಂಜನಾ, ಎಚ್.ಎನ್.ಧನುಷ್, ಶಿವಳ್ಳಿ ಶ್ರೀ ವೆಂಕಟೇಶ್ವರ ವಿದ್ಯಾನಿಕೇತನ ಪ್ರೌಢಶಾಲೆಯ ಎನ್.ಚಂದನ, ಹುಳ್ಳೇನಹಳ್ಳಿಯ ಎಚ್.ಪಿ.ಕಿಶೋರ್‌ಗೌಡ ಅವರಿಗೆ ನೀಡಿ ಗೌರವಿಸಲಾಗುವುದು ಎಂದರು.
ಗೋಷ್ಠಿಯಲ್ಲಿ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್ ಇದ್ದರು.