ಸ್ಪರ್ಧಾ ಪ್ರಪಂಚದಲ್ಲಿ ಪ್ರತಿಯೊಬ್ಬರೂ ಜಾಗೃತರಾಗಿರಿ

| Published : Sep 09 2025, 01:00 AM IST

ಸಾರಾಂಶ

ಇಂದು ದಿನದಿಂದ ದಿನಕ್ಕೆ ಹೊಸ ಹೊಸ ಆವಿಷ್ಕಾರ, ವಿಜ್ಞಾನ ಮತ್ತು ತಂತ್ರಜ್ಞಾನಗಳು ಬೆಳೆಯುತ್ತಿದ್ದು, ಅದಕ್ಕೆ ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ಸ್ಪರ್ಧಾ ಪ್ರಪಂಚದಲ್ಲಿ ಪ್ರತಿಯೊಬ್ಬರೂ ಜಾಗೃತರಾಗಿರಬೇಕು ಎಂದು ಮೈಸೂರು ವಿವಿ ಮಾನಸಗಂಗೋತ್ರಿ ಐಕ್ಯೂಎಸಿ ಸಂಯೋಜಕ ಡಾ.ಜೆ. ಲೋಹಿತ್‌ ತಿಳಿಸಿದರು.

ವಿಜಯನಗರದ ಏಮ್‌ ಅಕಾಡೆಮಿ ಆಯೋಜಿಸಿದ್ದ ಶಿಕ್ಷಣರ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ಎಲ್ಲಾ ರಂಗದಲ್ಲಿಯೂ ಪೈಪೋಟಿ ಇದೆ. ಇದನ್ನು ಎದುರಿಸಬೇಕಾದರೆ ವಿದ್ಯಾರ್ಥಿಗಳು ಛಲ ಮತ್ತು ಗುರಿಯೊಂದಿಗೆ ವಿದ್ಯಾಭ್ಯಾಸದಲ್ಲಿ ನಿರತರಾಗಬೇಕು. ಹಾಗಾದಾಗ ಮಾತ್ರ ಯಶಸ್ಸನ್ನು ಸಾಧಿಸಬಹುದು ಎಂದರು.

ಇಂದು ದಿನದಿಂದ ದಿನಕ್ಕೆ ಹೊಸ ಹೊಸ ಆವಿಷ್ಕಾರ, ವಿಜ್ಞಾನ ಮತ್ತು ತಂತ್ರಜ್ಞಾನಗಳು ಬೆಳೆಯುತ್ತಿದ್ದು, ಅದಕ್ಕೆ ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಿಕೊಳ್ಳಬೇಕು. ಮೊಬೈಲ್ ಹಾಗೂ ಟಿವಿ ನೋಡುವುದೇ ಜೀವನವಲ್ಲ. ಬೇಕಾದ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿ ವಿಚಾರ ಮಂಥನ ನಡೆಸಬೇಕು. ಬೇಡವಾದ ಅನಗತ್ಯ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ ಏಕಾಗ್ರತೆಯಲ್ಲಿ ತೊಡಗಿದಾಗ ಮಾತ್ರ ಗುರಿ ಸಾಧಿಸಲು ಸುಲಭವಾಗುತ್ತದೆ ಎಂದು ಹೇಳಿದರು.

ಏಮ್‌ ಅಕಾಡೆಮಿಯ ಸಂಸ್ಥಾಪಕ ಸಂಜಯ್, ಉಪನ್ಯಾಸಕರಾದ ಮೋಹನ್, ರಾಜೇಂದ್ರಪ್ರಸಾದ್, ಸಂಯೋಜಕಿ ಮೇಘನಾ ಇದ್ದರು. ರನ್ವಿತಾ ಪ್ರಾರ್ಥಿಸಿದರು. ಲಕ್ಷ್ಮೀ ಸ್ವಾಗತಿಸಿದರು. ಪ್ರಗತಿ ವಂದಿಸಿದರು.