ಸಮಾನತೆಯ ಕನಸು ಕಂಡಿದ್ದ ಡಾ. ಬಾಬು ಜಗಜೀವನರಾಂ: ಡಾ.ವೀರಣ್ಣ ಚರಂತಿಮಠ

| Published : Apr 07 2025, 12:30 AM IST

ಸಮಾನತೆಯ ಕನಸು ಕಂಡಿದ್ದ ಡಾ. ಬಾಬು ಜಗಜೀವನರಾಂ: ಡಾ.ವೀರಣ್ಣ ಚರಂತಿಮಠ
Share this Article
  • FB
  • TW
  • Linkdin
  • Email

ಸಾರಾಂಶ

ಅಧಿಕಾರ ಮತ್ತು ಐಶ್ವರ್ಯಗಳಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಗಳಿಸಬಹುದೆಂಬ ಸಂದೇಶ ಸಾರಿದವರು ಡಾ.ಬಾಬು ಜಗಜೀವನರಾಂ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಅಧಿಕಾರ ಮತ್ತು ಐಶ್ವರ್ಯಗಳಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಗಳಿಸಬಹುದೆಂಬ ಸಂದೇಶ ಸಾರಿದವರು ಡಾ.ಬಾಬು ಜಗಜೀವನರಾಂ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ನಗರದ ಶಿವಾನಂದ ಜೀನನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಿಂದ ಹಮ್ಮಿಕೊಂಡ ಡಾ.ಬಾಬು ಜಗಜೀವನರಾಂ ಅವರ ಜನ್ಮದಿನಾಚರಣೆ ನಿಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು .

ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಬದುಕಬೇಕು ಎಂಬ ಮಹದಾಸೆ ಹೊಂದಿದ್ದರು. ದೇಶದ ಜನರು ಅಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಪ್ರಾರಂಭಿಸಿದರು. ಇಂತಹ ಮಹಾನ್ ನಾಯಕರ ಕೊಡುಗೆ, ತತ್ವಾದರ್ಶಗಳನ್ನು ಯುವ ಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಮುತ್ತಣ್ಣ ಬೆಣ್ಣೂರ ಅವರು ಡಾ.ಬಾಬು ಜಗಜೀವನರಾಂ ಅವರ ಜೀವನ ನಡೆದು ಬಂದ ದಾರಿ ಬಗ್ಗೆ ತಿಳಿಸಿದರು.

ಮುಖಂಡರಾದ ಡಾ.ಎಂ.ಎಸ್. ದಡ್ಡೆನ್ನವರ, ಜಿ.ಎನ್. ಪಾಟೀಲ, ನಗರಸಭೆ ಅಧ್ಯಕ್ಷೆ ಸವಿತಾ ಲಂಕೆನ್ನವರ, ಉಪಾಧ್ಯಕ್ಷೆ ಶೋಭಾ ರಾವ್, ಸದಸ್ಯೆ ಸರಸ್ವತಿ ಕುರಬರ, ಶಿವಾನಂದ ಟವಳಿ,ಯಲ್ಲಪ್ಪ ನಾರಾಯಣಿ, ಸತ್ಯನಾರಾಯಣ ಹೆಮಾದ್ರಿ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ, ಶ್ರೀಧರ ನಾಗರಬೆಟ್ಟ ಸೇರಿದಂತೆ ಅನೇಕರು ಭಾಗವಹಿಸಿದ್ದರು.