ಶೋಷಿತರ ಏಳಿಗೆಗೆ ಶ್ರಮಿಸಿದ ಡಾ.ಜಗಜೀವನರಾಮ್‌

| Published : Apr 07 2025, 12:31 AM IST

ಶೋಷಿತರ ಏಳಿಗೆಗೆ ಶ್ರಮಿಸಿದ ಡಾ.ಜಗಜೀವನರಾಮ್‌
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಯ ದೆಸೆಯಲ್ಲಿಯೆ ಜಗಜೀವನ್ ರಾಂ ಅವರು ಶಾಲಾ ಶಿಕ್ಷಣವನ್ನು ಪಡೆಯುತ್ತಿರುವ ಸಮಯದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದರು. ಶಾಲೆಯಲ್ಲಿ ದಲಿತರಿಗೆ ಪ್ರತ್ಯೇಕವಾಗಿ ಇಟ್ಟಿದ್ದ ಕುಡಿಯುವ ನೀರಿನ ಮಡಕೆಯನ್ನು ಎರಡು ಬಾರಿ ಒಡೆದರು. ನಂತರ ಪ್ರಾಂಶುಪಾಲರು ಶಾಲೆಯಿಂದ ಪ್ರತ್ಯೇಕ ಕುಡಿಯುವ ನೀರಿನ ಮಡಕೆಯನ್ನು ತೆಗೆದುಹಾಕಬೇಕಾಯಿತು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಡಾ. ಬಾಬು ಜಗಜೀವನರಾಂ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಶೋಷಿತ ವರ್ಗದ ಏಳಿಗೆಗಾಗಿ ಅಹರ್ನಿಶಿ ಶ್ರಮಿಸಿ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನರಾಂ ರವರ 118ನೇ ಜಯಂತಿ ಉದ್ಘಾಟಿಸಿ ಮಾತನಾಡಿದರು.

ಅಸ್ಪೃಶ್ಯತೆ ವಿರುದ್ಧ ಹೋರಾಟ

ವಿದ್ಯಾರ್ಥಿಯ ದೆಸೆಯಲ್ಲಿಯೆ ಜಗಜೀವನ್ ರಾಂ ಅವರು ಶಾಲಾ ಶಿಕ್ಷಣವನ್ನು ಪಡೆಯುತ್ತಿರುವ ಸಮಯದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದರು. ಶಾಲೆಯಲ್ಲಿ ದಲಿತರಿಗೆ ಪ್ರತ್ಯೇಕವಾಗಿ ಇಟ್ಟಿದ್ದ ಕುಡಿಯುವ ನೀರಿನ ಮಡಕೆಯನ್ನು ಎರಡು ಬಾರಿ ಒಡೆದರು. ನಂತರ ಪ್ರಾಂಶುಪಾಲರು ಶಾಲೆಯಿಂದ ಪ್ರತ್ಯೇಕ ಕುಡಿಯುವ ನೀರಿನ ಮಡಕೆಯನ್ನು ತೆಗೆದುಹಾಕಬೇಕಾಯಿತು ಎಂದರು. ಬಾಬೂಜಿ ಕೊಡುಗೆ ಸ್ಮರಣೀಯ

ಶಿಡ್ಲಘಟ್ಟ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿಜಯೇಂದ್ರ ಕುಮಾರ್ ಮಾತನಾಡಿ, ಜಗಜೀವನ್ ರಾಂ ರವರು ದೇಶ ಕಂಡ ನಿಸ್ವಾರ್ಥ ಹಾಗೂ ಸ್ವಾಭಿಮಾನಿ ರಾಜಕಾರಿಣಿ. ಶಿಕ್ಷಣ, ಸಂಘಟನೆ ಹಾಗೂ ಹೋರಾಟದಲ್ಲಿ ಬಲವಾಗಿ ನಂಬಿಕೆ ಇಟ್ಟಿದ್ದರು. ಬಾಬೂಜೀ ಉನ್ನತ ಶಿಕ್ಷಣವನ್ನು ಪಡೆದು ದೇಶಕ್ಕೆ ಎಂದೂ ಮರೆಯಲಾಗದ ಕೊಡುಗೆಗಳನ್ನು ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಉಪ ಪೊಲೀಸ್ ಅಧೀಕ್ಷಕ ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಈಶ್ವರಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ತಹಸಿಲ್ದಾರ್ ಅನಿಲ್,ದಲಿತ ಮುಖಂಡರಾದ ಸುಧಾವೆಂಕಟೇಶ್, ಬಿ.ಎನ್.ಗಂಘಾಧರಪ್ಪ ಮತ್ತಿತರರು ಇದ್ದರು.