ಸಾರಾಂಶ
ಡಾ.ಎಂ.ಎನ್. ರಾಜೇಂದ್ರ ಕುಮಾರ್ ಇದೀಗ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಸತತ 30 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಇಂತಹ ಸಾಧನೆ ಮಾಡಿ ಹೊಸ ಇತಿಹಾಸ ಬರೆದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳು ಬುಧವಾರ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಗೌರವಿಸಿ ಅಭಿನಂದಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಗ್ರಮಾನ್ಯ ಬ್ಯಾಂಕ್ ಎನಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿರುವ ಬ್ಯಾಂಕ್. ಹಲವಾರು ರಾಷ್ಟ್ರೀಯ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಈ ಬ್ಯಾಂಕ್ ಮುಡಿಗೇರಿಸಿಕೊಂಡಿದೆ. ಇವೆಲ್ಲವೂ ‘ಸಹಕಾರ ರತ್ನ’ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ದಕ್ಷ ಅಧ್ಯಕ್ಷತೆಯಿಂದ ದೊರೆತ ಪ್ರಶಸ್ತಿಗಳು.ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನ ಅದ್ಭುತ ಕಾರ್ಯವೈಖರಿಯಿಂದ ಎಸ್ ಸಿಡಿಸಿಸಿ ಬ್ಯಾಂಕನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಇದೀಗ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಸತತ 30 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಇಂತಹ ಸಾಧನೆ ಮಾಡಿ ಹೊಸ ಇತಿಹಾಸ ಬರೆದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳು ಬುಧವಾರ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಗೌರವಿಸಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ.ರಾಜಾರಾಮ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ವಾದಿರಾಜ ಶೆಟ್ಟಿ ಎಂ, ದೇವಿಪ್ರಸಾದ್ ಶೆಟ್ಟಿ ಬೆಳಪು , ಶಶಿಕುಮಾರ್ ರೈ ಬಾಲ್ಯೋಟ್ಟು, ಎಸ್. ಬಿ.ಜಯರಾಮ ರೈ, ರಾಜು ಪೂಜಾರಿ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ , ಮೋನಪ್ಪ ಶೆಟ್ಟಿ ಎಕ್ಕಾರು, ಹರಿಶ್ಚಂದ್ರ, ಕೆ. ಜೈರಾಜ್ ಬಿ.ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಎಸ್.ಎನ್. ಮನ್ಮಥ , ಕುಶಾಲಪ್ಪ ಗೌಡ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್, ಉಭಯ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್. ಎನ್ , ಲಾವಣ್ಯ , ಉಭಯ ಜಿಲ್ಲೆಯ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಪ್ರಸಾದ್ ಕೌಶಲ್ ಶೆಟ್ಟಿ ಮತ್ತಿತರರಿದ್ದರು.