ಡಾ.ಮಂಜುನಾಥ್ ಗೆಲುವು: ಕಾರ್ಯಕರ್ತರ ಸಂಭ್ರಮ

| Published : Jun 05 2024, 12:30 AM IST

ಸಾರಾಂಶ

ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಎನ್‌ಡಿಎ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಗೆಲುವು ಸಾಧಿಸುತ್ತಿದ್ದಂತೆ ಜೆಡಿಎಸ್ - ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಎನ್‌ಡಿಎ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಗೆಲುವು ಸಾಧಿಸುತ್ತಿದ್ದಂತೆ ಜೆಡಿಎಸ್ - ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಟಿವಿ ಹಾಗೂ ಜಾಲತಾಣಗಳಲ್ಲಿ ಎನ್ ಡಿಎ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಗೆಲವು ಸಾಧಿಸುತ್ತಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ತಮ್ಮ ನಾಯಕನ ಪರ ಘೋಷಣೆ ಕೂಗುತ್ತಾ ಸಂಭ್ರಮಾಚರಿಸಿದರು. ಮಾಗಡಿ ಪಟ್ಟಣದ ಕಲ್ಯಾಗೇಟ್‌ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗೆ 29973 ಮತಗಳ ಲೀಡ್ ಬಂದಿದ್ದು ಸಂಭ್ರಮಾಚರಣೆ ಇನ್ನಷ್ಟು ಹೆಚ್ಚಾಗಲು ಕಾರಣವಾಯಿತು.

ಮಾಜಿ ಶಾಸಕರಿಗೆ ಭವ್ಯ ಸ್ವಾಗತ:

ಡಾ. ಸಿ.ಎನ್.ಮಂಜುನಾಥ್ ಅವರ ಗೆಲುವಿಗೆ ಮಾಜಿ ಶಾಸಕ ಎ.ಮಂಜುನಾಥ್ ಪಾತ್ರ ಸಾಕಷ್ಟಿದ್ದು, ರಾಮನಗರದಿಂದ ಮಾಗಡಿಗೆ ಮಾಜಿ ಶಾಸಕರು ಆಗಮಿಸುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಹೂಮಾಲೆ ಹಾಕಿ ಭವ್ಯ ಸ್ವಾಗತ ಕೋರಿದರು. ಅಭಿಮಾನಿಗಳು ಕೇಕ್ ಕತ್ತರಿಸಿ, ಸಿಹಿ ತಿನ್ನಿಸಿ ಗೆಲುವಿನ ಸಂಭ್ರಮ ಹಂಚಿಕೊಂಡರು. ಕಳೆದ ವಿಧಾನಸಭಾ ಕ್ಷೇತ್ರದ ಸೋಲಿನ ನೋವನ್ನು ಈ ಬಾರಿಯ ಗೆಲುವಿನೊಂದಿಗೆ ಜೆಡಿಎಸ್ ಕಾರ್ಯಕರ್ತರು ಮರೆತು ಸಂಭ್ರಮಾಚರಣೆಯಲ್ಲಿ ತೊಡಗಿದ್ದು ಕಂಡು ಬಂದಿತ್ತು. ಕಲ್ಯಾಗೇಟ್ ನಿಂದ ಜೆಡಿಎಸ್ ಕಚೇರಿವರೆಗೂ ಪಾದಯಾತ್ರೆ ಮೂಲಕ ಮಾಜಿ ಶಾಸಕ ಎ.ಮಂಜುನಾಥ್ ಅವರಿಗೆ ಕಾರ್ಯಕರ್ತರು ಸ್ವಾಗತಿಸಿದರು.(ಫೋಟೋ ಕ್ಯಾಫ್ಷನ್‌)

ಮಾಗಡಿ ತಾಲೂಕಿನ ವೀರೇಗೌಡನ ದೊಡ್ಡಿಯಲ್ಲಿ ಡಾ. ಮಂಜುನಾಥ್ ಗೆಲುವು ಸಾಧಿಸಿದ ಕೂಡಲೇ ಮಾಜಿ ಶಾಸಕ ಎ. ಮಂಜುನಾಥ್ ಗೆ ಕಾರ್ಯಕರ್ತರು ಹೂ ಮಾಲೆ ಹಾಕಿ ಸಂಭ್ರಮಿಸಿದರು.