ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ದೇಶದ ಆರ್ಥಿಕತೆಗೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು.ಪಟ್ಟಣದ ಶಿವಪುರದ ಮದ್ದೂರು ಬ್ಲಾಕ್ ಕಾಂಗ್ರೆಸ್ ಕಚೇರಿ ಹಾಗೂ ಉದಯ್ ಚಾರಿಟಬಲ್ ಟ್ರಸ್ಟ್‌ನಿಂದ ದಿ.ಡಾ. ಮನಮೋಹನ್ ಸಿಂಗ್ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿದ ನಂತರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ಶ್ರೇಷ್ಠ ಅರ್ಥಶಾಸ್ತ್ರಜ್ಞರಾಗಿ ಮನಮೋಹನ್ ಸಿಂಗ್ ಅವರು ಮುಕ್ತ ಆರ್ಥಿಕ ನೀತಿ ಮೂಲಕ ಭಾರತದ ಅಭಿವೃದ್ಧಿಗೆ ನವ ಚೈತನ್ಯ ನೀಡಿದ್ದರು. ಡಾ.ಸಿಂಗ್ ಅವರು ಹಲವು ರಾಷ್ಟ್ರಗಳಿಗೆ ಆರ್ಥಿಕ ಸಂಕಷ್ಟದ ಕಾಲದಲ್ಲಿ ಮಾರ್ಗದರ್ಶನ ನೀಡಿದ್ದರೂ ಎಂದರು.
ಭಾರತದ ಆರ್ಥಿಕತೆಗೆ ಹೊಸ ಆಯಾಮ ನೀಡಿದ್ದ ಮೇಧಾವಿ ಮನಮೋಹನ್ ಸಿಂಗ್ ಹಣಕಾಸು ನಿರ್ವಹಣೆ, ಆರ್ಥಿಕ ನೀತಿ ಮತ್ತು ಅವರ ಅಪಾರಜ್ಞಾನದಿಂದ ಐಟಿ ಬಿಟಿ ಕ್ರಾಂತಿಗೆ ನಾಂದಿ ಹಾಡಿ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಸಾಧನೆ ಮಾಡಿದ್ದರು ಎಂದರು.ಈ ವೇಳೆ ಕಾಂಗ್ರೆಸ್ ಮುಖಂಡ ಸ್ಟಾರ್ ಚಂದ್ರು, ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಭಾರತಿನಗರ ಬ್ಲಾಕ್ ಅಧ್ಯಕ್ಷ ಅಣ್ಣೂರು ರಾಜೀವ್, ಮನ್ಮೂಲ ಮಾಜಿ ನಿರ್ದೇಶಕ ಕದಲೂರು ರಾಮಕೃಷ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಜ್ಜಿ ಹಳ್ಳಿ ರಾಮಕೃಷ್ಣ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಪುರಸಭಾಧ್ಯಕ್ಷ ಕೋಕಿಲ ಅರುಣ್, ಸದಸ್ಯ ಪ್ರಮೀಳಾ, ಕದಲೂರು ಗ್ರಾಮ ಅಧ್ಯಕ್ಷ ತಿಮ್ಮೇಗೌಡ, ಮುಖಂಡರಾದ ಕೆ.ಎಂ ರವಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.
;Resize=(128,128))
;Resize=(128,128))