ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ನವ ಉಡುಪಿಯ ನಿರ್ಮಾತೃ, ಮಾಜಿ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಅವರ ಜನ್ಮ ದಿನಾಚರಣೆಯು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.ಬಿಜೆಪಿ ಜಿಲ್ಲಾ ಪ್ರ. ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ. ಮುಖರ್ಜಿ ಮತ್ತು ಡಾ. ಆಚಾರ್ಯ ಅವರ ದೂರದರ್ಶಿತ್ವದ ಚಿಂತನೆಗಳು, ಕಾರ್ಯ ತತ್ಪರತೆ, ದೇಶಭಕ್ತಿ ಮತ್ತು ಜೀವನ ಮೌಲ್ಯಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಸ್ಫೂರ್ತಿದಾಯಕ ಎಂದರು.
ಮುಖರ್ಜಿ ಮತ್ತು ಆಚಾರ್ಯ ಅವರ ಭಾವಚಿತ್ರಕ್ಕೆ ಸಾಮೂಹಿಕ ಪುಷ್ಪಾರ್ಚನೆಗೈದು ನಮನ ಸಲ್ಲಿಸಲಾಯಿತು.ಈ ಸಂದರ್ಭ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಆಸಿಫ್ ಕಟಪಾಡಿ, ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷ ಸಂತೋಷ್ ಜತ್ತನ್ ಹೇರೂರು, ಉಡುಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಗ್ರಾಮಾಂತರ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್, ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಕಾರ್ಮಿಕ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯ ಶೈಲೇಂದ್ರ ಶೆಟ್ಟಿ, ಉಡುಪಿ ನಗರ ಒಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮೀಶ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.