ಸಾರಾಂಶ
ಸೆ.24ರಂದು ಸಂಜೆ 5 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಹವಾನಿಯಂತ್ರಿತ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಘ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ. - ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತುಗಳ ಸಹಯೋಗದಲ್ಲಿ ನೀಡುತ್ತಿರುವ ಸಂಗೊಳ್ಳಿ ರಾಯಣ್ಣ ಪುರಸ್ಕಾರ-2025ಕ್ಕೆ ಸಾಮಾಜಿಕ ಹೋರಾಟಗಾರ, ಚಿಂತಕ ಹಾಗೂ ಪ್ರಸಿದ್ಧ ಮನೋವೈದ್ಯ ಡಾ. ಪಿ.ವಿ.ಭಂಡಾರಿ ಆಯ್ಕೆಯಾಗಿದ್ದಾರೆ.ಸೆ.24ರಂದು ಸಂಜೆ 5 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಹವಾನಿಯಂತ್ರಿತ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಘ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಸಂಗೊಳ್ಳಿ ರಾಯಣ್ಣ ಬಳಗದ ಗೌರವಾಧ್ಯಕ್ಷ ಜನಾರ್ದನ ಕೊಡವೂರು, ಕಾರ್ಯಾಧ್ಯಕ್ಷ ಕುಮಾರ್ ಪ್ರಸಾದ್, ಪದಾಧಿಕಾರಿ ಪ್ರಸನ್ನ ಹಿರೇಮಠ್ ಉಪಸ್ಥಿತರಿದ್ದರು.ಡಾ. ಪಿ. ವಿ. ಭಂಡಾರಿ:ಡಾ. ಪಿ.ವಿ. ಭಂಡಾರಿ ಅವರು ಕಳೆದ 15 ವರ್ಷಗಳಿಂದ ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ತಜ್ಞ ಮನೋವೈದ್ಯ ಮತ್ತು ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಹಲವು ಸಮಾಜಪರ ಹೋರಾಟದಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಭಂಡಾರಿ ಅವರ ಕೊಡುಗೆ ಬಹಳ ದೊಡ್ಡದು. ಮನೋವೈದ್ಯರಾಗಿ ಸಾವಿರಾರು ಮಂದಿಗೆ ನೆಮ್ಮದಿಯ ಬದುಕನ್ನು ನೀಡಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ. ಶ್ರೇಷ್ಠ ಮನೋವೈದ್ಯ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಪುರಸ್ಕಾರ, ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಡಾ. ಎಸ್.ಎಸ್. ಜಯರಾಂ ಪ್ರಶಸ್ತಿ, ಸ್ಪಂದನ ಪ್ರಶಸ್ತಿ, ಕರ್ನಾಟಕ ರಾಜ್ಯ ಸರ್ಕಾರದಿಂದ ನೀಡುವ ಸಂಯಮ ಪ್ರಶಸ್ತಿ ಹೀಗೆ ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
;Resize=(128,128))
;Resize=(128,128))
;Resize=(128,128))