ಮಾಯಕೊಂಡ ವ್ಯಾಪ್ತಿಯಲ್ಲಿ ಡಾ.ಪ್ರಭಾ ಮತಯಾಚನೆ

| Published : Apr 30 2024, 02:02 AM IST

ಸಾರಾಂಶ

ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಚಿನ್ನಸಮುದ್ರ ಗ್ರಾಮದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಚುನಾವಣಾ ಪ್ರಚಾರ ಮಾಡಿದರು.

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ಚಿನ್ನಸಮುದ್ರ ಗ್ರಾಮದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಚುನಾವಣಾ ಪ್ರಚಾರ ಮಾಡಿದರು.

ಮಾಯಕೊಂಡ ಶಾಸಕ ಬಸವಂತಪ್ಪ ಮಾತನಾಡಿ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದವರು ಈ ದೇಶದಲ್ಲಿ ಶಾಂತಿಯುತವಾಗಿ ಬದುಕಬೇಕೆಂದರೆ ಕೋಮುವಾದಿ ಬಿಜೆಪಿ ಪಕ್ಷವನ್ನ ಹೊರಗಿಟ್ಟು, ಕಾಂಗ್ರೆಸ್‌ಗೆ ಮತ ನೀಡಿ. ಪ್ರಭಾ ಮಲ್ಲಿಕಾರ್ಜುನ ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನೆರ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಶಿಬಾಯಿ ಶೇಖರ್ ನಾಯ್ಕ್, ಚಿನ್ನಸಮುದ್ರ ಗ್ರಾಮದ ಕಾಂಗ್ರೆಸ್ ಬ್ಲಾಕ್ ಸಮಿತಿಯ ಅಧ್ಯಕ್ಷ ಸುರೇಶ ನಾಯ್ಕ್, ರೈತ ಹೋರಾಟಗಾರ ಶೇಖರ್ ನಾಯ್ಕ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡರಾದ ಮುದೆಗೌಡ್ರು ಗಿರೀಶ್ ಹಾಗೂ ಹಿರಿಯ ಕಾಂಗ್ರೆಸ್ ಹಿರಿಯ ಮುಖಂಡರು ಭಾಗವಹಿಸಿದ್ದರು.

- - - -29ಕೆಡಿವಿಜಿ36ಃ:

ದಾವಣಗೆರೆಯ ಮಾಯಕೊಂಡ ಕ್ಷೇತ್ರದ ಚಿನ್ನಸಮುದ್ರದಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ್ ಚುನಾವಣಾ ಪ್ರಚಾರ ನಡೆಸಿದರು.