ದಾವಣಗೆರೆ ಲೋಕಸಭಾ ಕ್ಷೇತ್ರ ಇನ್ನಷ್ಟು ಅಭಿವೃದ್ಧಿಗೆ ಡಾ.ಪ್ರಭಾ ಗೆಲ್ಲಿಸಬೇಕು : ಶಾಮನೂರು

| Published : Apr 27 2024, 01:32 AM IST / Updated: Apr 27 2024, 08:56 AM IST

Congress flag
ದಾವಣಗೆರೆ ಲೋಕಸಭಾ ಕ್ಷೇತ್ರ ಇನ್ನಷ್ಟು ಅಭಿವೃದ್ಧಿಗೆ ಡಾ.ಪ್ರಭಾ ಗೆಲ್ಲಿಸಬೇಕು : ಶಾಮನೂರು
Share this Article
  • FB
  • TW
  • Linkdin
  • Email

ಸಾರಾಂಶ

ದಾವಣಗೆರೆ ಲೋಕಸಭಾ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಆಗಬೇಕೆಂದರೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸುವಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮನವಿ ದಾವಣಗೆರೆಯಲ್ಲಿ ಮಾಡಿದ್ದಾರೆ.

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಆಗಬೇಕೆಂದರೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸುವಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮನವಿ ಮಾಡಿದರು.

ಗುರುವಾರ ಕ್ಷೇತ್ರ ವ್ಯಾಪ್ತಿಯ 10ನೇ ವಾರ್ಡ್‌ ನಾಗರಿಕರ ಸಭೆಯಲ್ಲಿ ಮಾತನಾಡಿ, ಡಾ.ಪ್ರಭಾ ಮಲ್ಲಿಕಾರ್ಜುನ್ ವಿದ್ಯಾವಂತೆ. ಕೇಂದ್ರದಿಂದ ಹೆಚ್ಚಿನ ಅನುದಾನ ತಂದು ಇನ್ನಷ್ಟು ಅಭಿವೃದ್ಧಿಗೆ ಒತ್ತು ನೀಡುವರು. ಕಾಂಗ್ರೆಸ್ ನುಡಿದಂತೆ ನಡೆದಿದೆ ಎಂಬುದನ್ನು ನಾವೂ ಸಾಬೀತುಪಡಿಸಿದ್ದೇವೆ. ನಮ್ಮ ಸರ್ಕಾರ ಭರವಸೆಯನ್ನು ಈಡೇರಿಸಿದ ತೃಪ್ತಿ ಹೊಂದಿದ್ದೇನೆ ಎಂದರು.

ಮಾಜಿ ಸಂಸದ ಕೆ.ಸಿ.ಕೊಂಡಯ್ಯ ಮಾತನಾಡಿ, ಪ್ರಭಾ ಮಲ್ಲಿಕಾರ್ಜುನ್ ಅವರು ಎಸ್.ಎಸ್. ಟ್ರಸ್ಟ್ ಮೂಲಕ ಸಾಮಾಜಿಕ ಸೇವೆ ಮಾಡುತ್ತಿದ್ದಾರೆ. ಅವರಿಗೆ ಜನರ ಸಂಕಷ್ಟ ಅರ್ಥ ಮಾಡಿಕೊಳ್ಳುವ ಗುಣವಿದೆ. ನೀವು ಬಹುಮತದಿಂದ ಗೆಲ್ಲಿಸಿದರೆ ದಾವಣಗೆರೆ ಘನತೆ ಇನ್ನಷ್ಟು ಹೆಚ್ಚಿಸುವರು ಎಂದರು.

ವಾರ್ಡ್‍ನ ಮುಖಂಡ ಸತೀಶ್ ಅಧ್ಯಕ್ಷತೆ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಬಾಯಿ, ಡೂಡಾ ಮಾಜಿ ಅಧ್ಯಕ್ಷ ಮಾಲತೇಶ್ ರಾವ್, ಮೇಯರ್ ವಿನಾಯಕ ಪೈಲ್ವಾನ್, ಮಹಾನಗರ ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್, ಕಾಂಗ್ರೆಸ್ ಮುಖಂಡ ಬಾಬುರಾವ್ ಸಾಳಂಕಿ, ಮಹಿಳಾ ಕಾಂಗ್ರೆಸ್‍ನ ಮಂಜಮ್ಮ, ಉಮೇಶ್ ರಾವ್ ಸಾಳಂಕಿ, ಗೌಡರ ಚನ್ನಬಸಪ್ಪ, ಕ್ಯಾಪ್ಟನ್ ನಾಗರಾಜ್, ಗುರುರಾಜ್ ಮರಿಯಪ್ಪ ಮತ್ತಿತರರಿದ್ದರು.