ಡಾ.ಪ್ರಕಾಶ್‌ ಶೆಟ್ಟಿಗೆ ವಂದನಾ ಪ್ರಶಸ್ತಿ ಪ್ರದಾನ

| Published : Apr 04 2025, 12:49 AM IST / Updated: Apr 04 2025, 12:50 AM IST

ಡಾ.ಪ್ರಕಾಶ್‌ ಶೆಟ್ಟಿಗೆ ವಂದನಾ ಪ್ರಶಸ್ತಿ ಪ್ರದಾನ
Share this Article
  • FB
  • TW
  • Linkdin
  • Email

ಸಾರಾಂಶ

ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ‍್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಜಂಟಿ ಆಶ್ರಯದಲ್ಲಿ ಪ್ರಾಯೋಜಿಸಿದ ರಾಜ್ಯ ಮಟ್ಟದ 22ನೇ ವಾರ್ಷಿಕ ಮತ್ತು 2025ನೇ ಸಾಲಿನ “ವಂದನಾ ಪ್ರಶಸ್ತಿ”ಯನ್ನು ಉದ್ಯಮಿ ಡಾ.ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ‍್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಜಂಟಿ ಆಶ್ರಯದಲ್ಲಿ ಪ್ರಾಯೋಜಿಸಿದ ರಾಜ್ಯ ಮಟ್ಟದ 22ನೇ ವಾರ್ಷಿಕ ಮತ್ತು 2025ನೇ ಸಾಲಿನ “ವಂದನಾ ಪ್ರಶಸ್ತಿ”ಯನ್ನು ಉದ್ಯಮಿ ಡಾ.ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಪ್ರಕಾಶ್ ಶೆಟ್ಟಿ, ತಮ್ಮ ಸಾಧನೆಗೆ ದೇವರ ಅನುಗ್ರಹ, ಗುರುಗಳ ಮಾರ್ಗದರ್ಶನ, ಉಪದೇಶ, ಹಿರಿಯರ ಆಶೀರ್ವಾದ, ಗ್ರಾಹಕರ ವಿಶ್ವಾಸ, ಕುಟುಂಬ, ಮಿತ್ರರ ಸಹಕಾರ, ಅದೇ ರೀತಿ ವ್ಯವಹಾರ ದಕ್ಷತೆ, ಪ್ರಾಮಾಣಿಕತೆ, ಶ್ರಮ ಕೂಡ ಕಾರಣ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಇನ್ನಷ್ಟು ಸಾಧಿಸಲು ಪ್ರೇರಣೆ ದೊರೆತಿದೆ ಎಂದು ಹೇಳಿದರು.

ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಡಾ. ದೇವದಾಸ್ ರೈ ಮಾತನಾಡಿ, ವಂದನಾ ಪ್ರಶಸ್ತಿಯು ತಮ್ಮ ಸಂಸ್ಥೆಯ ವೃತ್ತಿಪರ ಸೇವಾ ಯೋಜನೆಯ ಅಂಗವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ ಸಾಧನೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತಿದೆ ಎಂದು ಹೇಳಿದರು.

ರೋಟರ‍್ಯಾಕ್ಟ್ ಸಂಸ್ಥೆಯ ಅಧ್ಯಕ್ಷ ಬಿದ್ದಪ್ಪ ಪ್ರಶಸ್ತಿ ವಿಜೇತರ ಪರಿಚಯ ಮತ್ತು ಸಾಧನೆಗಳ ಮಾಹಿತಿ ನೀಡಿದರು. ಸಹಾಯಕ ಗವರ್ನರ್‌ ಕೆ.ಎಂ. ಹೆಗ್ಡೆ ಅಭಿನಂದನಾ ಭಾಷಣ ಮಾಡಿದರು. ರೋಟರ‍್ಯಾಕ್ಟ್ ಸಂಸ್ಥೆಯ ಜಿಲ್ಲಾ ಪ್ರತಿನಿಧಿ ಸಂಜಯ್ ಅವರು ಸಂಸ್ಥೆಯ ಸಾಪ್ತಾಹಿಕ ಗೃಹ ವಾರ್ತಾ ಪತ್ರಿಕೆ “ಸೆಂಟೊರ್” ಬಿಡುಗಡೆಗೊಳಿಸಿದರು. ರೋಟರಿ ಮಂಗಳೂರು ಸೆಂಟ್ರಲ್‌ ಅಧ್ಯಕ್ಷ ಬ್ರೀಯಾನ್ ಪಿಂಟೋ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸುಧೀರ್ ಶೆಟ್ಟಿ ಅವರನ್ನು ಸಂಸ್ಥೆಗೆ ನೂತನ ಸದಸ್ಯರಾಗಿ ಸೇರ್ಪಡೆಗೊಳಿಸಲಾಯಿತು.

ಕಾರ್ಯದರ್ಶಿ ರಾಜೇಶ್ ಸಿತಾರಾಮ್ ವರದಿ ಮಂಡಿಸಿದರು. ಸಂಸ್ಥೆಯ ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ, ಚುನಾಯಿತ ಅಧ್ಯಕ್ಷ ಭಾಸ್ಕರ್ ರೈ ಇದ್ದರು. ರೋಟರ‍್ಯಾಕ್ಟ್ ಸಂಸ್ಥೆಯ ಕಾರ್ಯದರ್ಶಿ ಅಕ್ಷಯ್ ರೈ ವಂದಿಸಿದರು. ಲೆಕ್ಕ ಪರಿಶೋಧಕ ನಿತಿನ್ ಶೆಟ್ಟಿ ಈ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.