ಸಾರಾಂಶ
ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ನ. 21ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 9 ರವರೆಗೆ ತೆರೆದಿರುತ್ತದೆ.
ಕನ್ನಡಪ್ರಭ ವಾರ್ತೆ ಮೈಸೂರು
ರಾಜ್ಯ ಕೈಮಗ್ಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾವತಿ ಅಮರನಾಥ್ ಚಾಲನೆ ನೀಡಿದರು. ನಗರ ಪೊಲೀಸ್‌ಆಯುಕ್ತೆ ಸೀಮಾ ಲಾಟ್ಕರ್, ಜವಳಿ ಅಭಿವೃದ್ಧಿ ಆಯುಕ್ತೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ನಿರ್ದೇಶಕಿ ಕೆ. ಜ್ಯೋತಿ, ಜಿಪಂ ಸಿಇಒ ಕೆ.ಎಂ. ಗಾಯತ್ರಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ ಕುಲಪತಿ ಡಾ.ಎ.ಎನ್. ಸಂತೋಷ್‌ಕುಮಾರ್, ಬೆಂಗಳೂರಿನ ಕಾವೇರಿ ಹ್ಯಾಂಡ್‌ಲೂಮ್ಸ್ ನ ಎಂಡಿ ಶ್ರೀನಿವಾಸಮೂರ್ತಿ, ಕಾವೇರಿ ಹ್ಯಾಂಡ್‌ಲೂಮ್ಸ್ ಅಧ್ಯಕ್ಷ ಬಿ.ಜೆ. ಗಣೇಶ, ನೇಕಾರರ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಮಾರಿಮುತ್ತು, ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ರಂಗಸ್ವಾಮಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.ಈ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ನ. 21ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 9 ರವರೆಗೆ ತೆರೆದಿರುತ್ತದೆ.