ಅ.20 ರಂದು ಶಾಲಾ ಕಾಲೇಜುಗಳಲ್ಲಿ ಡಾ.ಪುತಿನ ಕಾರ್ಯಕ್ರಮಗಳಿಗೆ ಚಾಲನೆ: ಡಾ.ಬಿ.ವಿ.ನಂದೀಶ್

| Published : Oct 14 2025, 01:00 AM IST

ಅ.20 ರಂದು ಶಾಲಾ ಕಾಲೇಜುಗಳಲ್ಲಿ ಡಾ.ಪುತಿನ ಕಾರ್ಯಕ್ರಮಗಳಿಗೆ ಚಾಲನೆ: ಡಾ.ಬಿ.ವಿ.ನಂದೀಶ್
Share this Article
  • FB
  • TW
  • Linkdin
  • Email

ಸಾರಾಂಶ

ಕವಿಯ ಹುಟ್ಟೂರಾದ ಮೇಲುಕೋಟೆಯಲ್ಲಿ ಅ.20ರ ನರಕಚತುರ್ದಶಿ ಉತ್ಸವದಂದು ಪುತಿನ ಸಂಸ್ಮರಣೆ ವಿಸ್ತೃತ ಕಾರ್ಯಕ್ರಮ ಹಾಗೂ ಶಾಲಾ-ಕಾಲೇಜುಗಳಲ್ಲಿ ಡಾ.ಪು.ತಿ.ನ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೆರವೇರಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಮೇಲುಕೋಟೆ

ಪುತಿನ ಕಲಾ ಮಂದಿರದಲ್ಲಿ ಅ.20 ರಂದು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಖ್ಯಾತಕವಿ ಪುತಿನ ಸಂಸ್ಮರಣೆ ಹಾಗೂ ಶಾಲಾ- ಕಾಲೇಜುಗಳಲ್ಲಿ ಡಾ.ಪುತಿನ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ ಎಂದು ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್ ತಿಳಿಸಿದರು.

ಮೇಲುಕೋಟೆಯಲ್ಲಿ ಕವಿ ಪುಣ್ಯಸ್ಮರಣೆ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಾಂಕೇತಿಕ ಆಚರಿಸಿದ ನಂತರ ಕಲಾ ಮಂದಿರದಲ್ಲಿ ತಿಂಗಳೊಂದಾದರೂ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಬೇಕೆಂಬುದು ನಮ್ಮ ಆಶಯವಾಗಿದೆ ಎಂದರು.

ಕವಿಯ ಹುಟ್ಟೂರಾದ ಮೇಲುಕೋಟೆಯಲ್ಲಿ ಅ.20ರ ನರಕಚತುರ್ದಶಿ ಉತ್ಸವದಂದು ಪುತಿನ ಸಂಸ್ಮರಣೆ ವಿಸ್ತೃತ ಕಾರ್ಯಕ್ರಮ ಹಾಗೂ ಶಾಲಾ-ಕಾಲೇಜುಗಳಲ್ಲಿ ಡಾ.ಪು.ತಿ.ನ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೆರವೇರಿಸಲಿದ್ದಾರೆ ಎಂದರು.

ಸಮಾರಂಭದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸುವರು. ಜಿಪಂ ಸಿಇಒ ಕೆ.ಆರ್.ನಂದಿನಿ, ಎಸಿ ಕೆ.ಆರ್. ಶ್ರೀನಿವಾಸ್ ಪು.ತಿ.ನ ಟ್ರಸ್ಟ್ ಅಧ್ಯಕ್ಷ ಪ್ರೊ.ಎಂ.ಕೃಷ್ಣೇಗೌಡ, ಕೆಎಸ್‌ನ ಟ್ರಸ್ಟ್ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ, ಡಾ.ಮೀರಾ ಶಿವಲಿಂಗಯ್ಯ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ, ಡಾ.ಮೀರಾ ಶಿವಲಿಂಗಯ್ಯ, ತಾಲೂಕು ಕಸಾಪ ಅಧ್ಯಕ್ಷ ಪ್ರಕಾಶ್ ಮೇನಾಗರ ಸೇರಿದಂತೆ ಗ್ರಾಪಂ ವರಿಷ್ಠರು, ಪುತಿನ ಟ್ರಸ್ಟ್ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.

ಕವಿ ಪು.ತಿ.ನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕಾರ್ಯಕ್ರಮ ಆರಂಭವಾಗಲಿದೆ. ಇದೇ ವೇಳೆ ಮಕ್ಕಳಿಗೆ ಕವಿ ಬಗ್ಗೆ ಪರಿಚಯ ಮಾಡಿಸಲು ಯೋಜಿಸಿರುವ ಶಾಲಾ-ಕಾಲೇಜುಗಳಲ್ಲಿ ಪುತಿನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಸಾಂಕೇತಿಕವಾಗಿ ನಡೆದ ಪುತಿನ ಸಂಸ್ಮರಣೆಯಲ್ಲಿ ಕವಿಯ ಪ್ರತಿಮೆಗೆ ಗ್ರಾಪಂ ಪ್ರಭಾರ ಅಧ್ಯಕ್ಷ ಜಿ.ಕೆ.ಕುಮಾರ್, ಕನ್ನಡಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿನಂದೀಶ್ ಮಾಲಾರ್ಪಣೆ ಮಾಡಿದರು. ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮುಖ್ಯಶಿಕ್ಷಕ ಸ್ಥಾನೀಕಂ ಸಂತಾನರಾಮನ್, ಪು.ತಿ.ನ ಕಲಾಮಂದಿರ ವ್ಯವಸ್ಥಾಪಕ ವೆಂಕಟೇಶ್, ರಂಗನಿರ್ದೇಶಕ ದೃಶ್ಯಗಿರೀಶ್, ಶಿಕ್ಷಕ ಕೃಷ್ಣಪ್ಪ ಭಾಗವಹಿಸಿದ್ದರು.