ದೊಡ್ಡಬಳ್ಳಾಪುರ: ಇಲ್ಲಿನ ಖಾಸ್ಬಾಗ್-ಶ್ರೀನಗರ ಬಳಿ ಇರುವ ಶ್ರೀಗಂಗಾ, ಭಗತ್‌ಸಿಂಗ್-ಚಂದ್ರಶೇಖರ ಆಜಾದ್ ಆಸ್ಪತ್ರೆಯಲ್ಲಿ ಶುಕ್ರವಾರ ವರನಟ ಡಾ.ರಾಜ್ಕುಮಾರ್ ಅವರ 97ನೇ ಜನ್ಮದಿನಾಚರಣೆ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಶಿಬಿರದಲ್ಲಿ 126 ಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಹಿತಾಸಕ್ತಿಯ ಕೈಂಕರ್ಯದಲ್ಲಿ ಪಾಲ್ಗೊಂಡರು. ರಕ್ತದಾನಿಗಳಿಗೆ ಕನ್ನಡದ ಹೆಸರಾಂತ ಲೇಖಕರುಗಳ ಪುಸ್ತಕಗಳನ್ನು ಗೌರವಪೂರ್ವಕವಾಗಿ ನೀಡಲಾಯಿತು. ಪ್ರಮಾಣ ಪತ್ರ ವಿತರಿಸಲಾಯಿತು.ಡಾ.ರಮೇಶ್‌ಗೌಡ ಮಾತನಾಡಿ, ಕನ್ನಡ ನಾಡಿನ ಅನನ್ಯತೆಯ ಸಂಕೇತವಾಗಿರುವ ಡಾ.ರಾಜ್ಕುಮಾರ್ ಅವರ ಜನ್ಮದಿನಾಚರಣೆಯನ್ನು ಕಳೆದ 18 ವರ್ಷಗಳಿಂದ ನಿರಂತರವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ನಡೆಸಿಕೊಂಡು ಬರಲಾಗುತ್ತಿದೆ. ಪ್ರತಿವರ್ಷ ನೂರಾರು ಯುವಜನರು ರಕ್ತದಾನ ಮಾಡುತ್ತಿದ್ದಾರೆ. ರಕ್ತದಾನಿಗಳಿಗೆ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ಕನ್ನಡ ಓದುವ ಪ್ರವೃತ್ತಿ ಬೆಳೆಸಿಕೊಳ್ಳುವಂತೆ ಸಲಹೆ ನೀಡಲಾಗುತ್ತಿದೆ. ವಿವಿಧ ಸಂಘಟನೆಗಳು ಈ ಕಾರ್ಯದಲ್ಲಿ ಕೈಜೋಡಿಸುತ್ತಿರುವುದು ವಿಶೇಷ ಎಂದು ತಿಳಿಸಿದರು.
ತಾಲೂಕು ಶಿವರಾಜ್‌ಕುಮಾರ್ ಕನ್ನಡ ಸೇನಾ ಸಮಿತಿ, ದೊಡ್ಡಬಳ್ಳಾಪುರ ಲಯನ್ಸ್ ಸಂಸ್ಥೆ, ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟ್ಯೂಷನ್ಸ್, ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಪಾಲ್ಗೊಂಡರಿದ್ದರು.24ಕೆಡಿಬಿಪಿ4- ದೊಡ್ಡಬಳ್ಳಾಪುರದಲ್ಲಿ ಡಾ.ರಾಜ್ಕುಮಾರ್ ಅವರ ಜನ್ಮದಿನಾಚರಣೆ ಅಂಗವಾಗಿ ಶ್ರೀಗಂಗಾ, ಭಗತ್‌ಸಿಂಗ್-ಚಂದ್ರಶೇಖರ ಆಜಾದ್ ಆಸ್ಪತ್ರೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.