ಕಾರ್ಕಳ: ಕುಕ್ಕುಂದೂರಿನ ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಕಾರ್ಕಳ ಮಹಾಮಸ್ತಕಾಭಿಷೇಕ ಸಮಿತಿ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.ಮುಂಬರುವ ಕಾರ್ಕಳ ಮಹಾಮಸ್ತಕಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಸಮಿತಿಯಿಂದ ಈ ಗೌರವ ಸಮರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಎಸ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಸಮಾಜದ ಪ್ರಮುಖರಾದ ಪುಷ್ಪರಾಜ್ ಜೈನ್, ಸುನಿಲ್ ಕುಮಾರ್ ಬಜಗೋಳಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಮಿತಿಯ ಪದಾಧಿಕಾರಿಗಳು ಈ ವೇಳೆ ಮುಖ್ಯಮಂತ್ರಿಗಳೊಂದಿಗೆ ಮಹೋತ್ಸವದ ಸಿದ್ಧತೆಗಳು, ಅಗತ್ಯ ಮೂಲಸೌಕರ್ಯ ಹಾಗೂ ಸರ್ಕಾರದ ಸಹಕಾರ ಕುರಿತು ಚರ್ಚಿಸಿ, ಮಹೋತ್ಸವವನ್ನು ಯಶಸ್ವಿಯಾಗಿ ನೆರವೇರಿಸಲು ಸರ್ಕಾರದಿಂದ ಅಗತ್ಯ ಬೆಂಬಲ ನೀಡುವಂತೆ ಮನವಿ ಮಾಡಿದರು.ಮಹಾಮಸ್ತಕಾಭಿಷೇಕ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ
ಕುಕ್ಕುಂದೂರಿನ ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಕಾರ್ಕಳ ಮಹಾಮಸ್ತಕಾಭಿಷೇಕ ಸಮಿತಿ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.