ಐತಿಹಾಸಿಕ ಪಾತ್ರಗಳಿಗೆ ಜೀವ ತುಂಬಿದ ಡಾ.ರಾಜ್‌ಕುಮಾರ್‌

| Published : Apr 26 2025, 12:51 AM IST

ಐತಿಹಾಸಿಕ ಪಾತ್ರಗಳಿಗೆ ಜೀವ ತುಂಬಿದ ಡಾ.ರಾಜ್‌ಕುಮಾರ್‌
Share this Article
  • FB
  • TW
  • Linkdin
  • Email

ಸಾರಾಂಶ

ಡಾ.ರಾಜಕುಮಾರ್ ಕನ್ನಡ ನಾಡು, ನುಡಿ ಪ್ರೀತಿ ಅನನ್ಯವಾದದ್ದು. ಐತಿಹಾಸಿಕ ಪಾತ್ರಗಳ ಮೂಲಕ ಅವರು ಕರ್ನಾಟಕ ಇತಿಹಾಸದ ವೈಭವವನ್ನು ಮರುಸೃಷ್ಟಿಸಿದರು

ದೊಡ್ಡಬಳ್ಳಾಪುರ: ಡಾ.ರಾಜಕುಮಾರ್ ಕನ್ನಡ ನಾಡು, ನುಡಿ ಪ್ರೀತಿ ಅನನ್ಯವಾದದ್ದು. ಐತಿಹಾಸಿಕ ಪಾತ್ರಗಳ ಮೂಲಕ ಅವರು ಕರ್ನಾಟಕ ಇತಿಹಾಸದ ವೈಭವವನ್ನು ಮರುಸೃಷ್ಟಿಸಿದರು ಎಂದು ಕಸಾಪ ಕಸಬಾ ಹೋಬಳಿ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು. ತಾಲೂಕು ಕಸಾಪ ಏರ್ಪಡಿಸಿದ್ದ ಡಾ.ರಾಜ್ ಕುಮಾರ್ ಜನ್ಮದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ಗೋಕಾಕ್ ಚಳವಳಿಯಲ್ಲಿ ಅವರು ಭಾಗವಹಿಸಿದ ಬಳಿಕವೇ ಚಳವಳಿ ತೀವ್ರತೆ ಪಡೆದು ಕನ್ನಡ ಪ್ರಜ್ಞೆಯ ಜಾಗೃತಿಗೆ ಹೊಸ ಹಾದಿ ತೋರಿತು. ಸರಳ, ಸಜ್ಜನ, ನಿಷ್ಠಾವಂತ, ಪ್ರಾಮಾಣಿಕ, ಅಪ್ರತಿಮ ಕಲಾವಿದ ಎಂದು ಎಲ್ಲರ ಪ್ರೀತಿಗೆ ಪಾತ್ರರಾದ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ ಎಂದರು.

ತಾ.ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಕನ್ನಡಪರ ಹೋರಾಟಗಾರರಾದ ಗುರುರಾಜಪ್ಪ, ಟಿ.ಜಿ.ಮಂಜುನಾಥ್, ಬೆಂ.ಗ್ರಾ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಮಾಜಿ ಕೋಶಾಧ್ಯಕ್ಷ ನಂ.ಮಹಾದೇವ್, ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ‌‌ ಆಯುಕ್ತ ವೆಂಕಟರಾಜು, ಸೂರ್ಯ ಪ.ಪೂ ಕಾಲೇಜು ಪ್ರಾಚಾರ್ಯ ಎಂ.ಸಿ.ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ತಾ.ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಅಧ್ಯಕ್ಷ ದಾದಾಪೀರ್, ಪ್ರತಿನಿಧಿ ನಾಗರತ್ನಮ್ಮ, ಷಫೀರ್, ಕನ್ನಡ ಜಾಗೃತ ವೇದಿಕೆ ಜಿಲ್ಲಾ ಅಧ್ಯಕ್ಷ ನಾಗರಾಜು, ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ರಾಮಕೃಷ್ಣ ಭಾಗವಹಿಸಿದ್ದರು.