ಕಲಾವಿದರ ಸಂಘಕ್ಕೆ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ

| Published : Aug 31 2024, 01:37 AM IST

ಕಲಾವಿದರ ಸಂಘಕ್ಕೆ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಚಲನಚಿತ್ರ ಕಲಾವಿದರ ಸಂಘಕ್ಕೆ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಮಲ್ಲೇಶ್ವರದ ಸಹಕಾರ ಸೌಧದ ಮುಂದೆ ಡಾ.ರಾಜ್‌ಕುಮಾರ್‌ ಸೇನೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಚಲನಚಿತ್ರ ಕಲಾವಿದರ ಸಂಘಕ್ಕೆ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಮಲ್ಲೇಶ್ವರದ ಸಹಕಾರ ಸೌಧದ ಮುಂದೆ ಡಾ.ರಾಜ್‌ಕುಮಾರ್‌ ಸೇನೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಸೇನೆಯ ಅಧ್ಯಕ್ಷ ವಿ.ತ್ಯಾಗರಾಜ್‌, ಚಾಮರಾಜಪೇಟೆಯಲ್ಲಿರುವ ಚಲನಚಿತ್ರ ಕಲಾವಿದರ ಸಂಘಕ್ಕೆ 16 ವರ್ಷವಾದರೂ ಚುನಾವಣೆ ನಡೆಸಿಲ್ಲ. ಆದ್ದರಿಂದ ತಕ್ಷಣ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಬೇಕು. ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ ಅವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಕಲಾವಿದರ ಸಂಘದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಂಘಕ್ಕೆ ತಕ್ಷಣ ಚುನಾವಣೆ ನಡೆಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಮನವಿ ಪತ್ರವನ್ನು ಇದೇ ಸಂದರ್ಭದಲ್ಲಿ ಸಹಕಾರ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಯಿತು.