ಸಾರಾಂಶ
ಕಾಪು ಮಂಡಲ ಬಿಜೆಪಿ ಕಚೇರಿಗೆ ನೈರುತ್ಯ ಪದವೀಧರ ಕ್ಷೇತ್ರ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡ ಭೇಟಿ ನೀಡಿ, ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಸಂಬಂಧ ಶನಿವಾರ ಕಾಪು ಮಂಡಲ ಬಿಜೆಪಿ ಕಚೇರಿಗೆ ನೈರುತ್ಯ ಪದವೀಧರ ಕ್ಷೇತ್ರ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡ ಭೇಟಿ ನೀಡಿ, ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು.ನಂತರ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್ ಸಂಸ್ಥೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು.
ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ನೈರುತ್ಯ ಪದವೀಧರ ಕ್ಷೇತ್ರದ ಸಹಸಂಚಾಲಕರಾದ ಶಿಲ್ಪಾ ಜಿ. ಸುವರ್ಣ, ಶಿಕ್ಷಕರ ಕ್ಷೇತ್ರದ ಸಹ ಸಂಚಾಲಕರಾದ ವೀಣಾ ಎಸ್. ಶೆಟ್ಟಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯರಾದ ಶ್ಯಾಮಲ ಕುಂದರ್, ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷರಾದ ನಯನ ಗಣೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ ಉಪಸ್ಥಿತರಿದ್ದರು.