ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾರತದ ಪ್ರಸಿದ್ಧ ತತ್ವಜ್ಞಾನಿ

| Published : Sep 06 2024, 01:07 AM IST

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾರತದ ಪ್ರಸಿದ್ಧ ತತ್ವಜ್ಞಾನಿ
Share this Article
  • FB
  • TW
  • Linkdin
  • Email

ಸಾರಾಂಶ

ಚಾಮರಾಜನಗರ ತಾಲೂಕಿನ ಭೋಗಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾವಿತ್ರಿ ಬಾಯಿ ಭಾಪುಲೆ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಎಸ್.ಲಿಂಗಣ್ಣ ಉದ್ಘಾಟಿಸಿದರು.

ಶಿಕ್ಷಕರ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾರತದ ಪ್ರಸಿದ್ಧ ತತ್ವಜ್ಞಾನಿ, ಅನನ್ಯ ಶಿಕ್ಷಕರಾಗಿದ್ದರು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿವೃತ್ತ ಪ್ರಾಂಶುಪಾಲ ಪ್ರೊ.ಎಸ್.ಲಿಂಗಣ್ಣ ಹೇಳಿದರು.ತಾಲೂಕಿನ ಭೋಗಾಪುರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾವಿತ್ರಿ ಬಾಯಿ ಭಾಪುಲೆ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಧಾಕೃಷ್ಣನ್ ಅವರು ಮದ್ರಾಸಿನ ಕಾಲೇಜಿನಲ್ಲಿ ಅಧ್ಯಯನ ಮಾಡಿ ಪ್ರಸಿದ್ಧ ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರಾದರು. ಭಾರತೀಯ ಇತಿಹಾಸದಲ್ಲಿ ಮಹಾನ್ ವಿದ್ವಾಂಸರು, ತತ್ವಜ್ಞಾನಿ ಮತ್ತು ರಾಜನೀತಿ ಬಗ್ಗೆ ಪಾಂಡಿತ್ಯ ಹೊಂದಿದ್ದರು. ಅವರು ತುಲಾನಾತ್ಮಕ ಧರ್ಮದ ಬಗ್ಗೆ ತಮ್ಮ ಕೆಲಸದ ಮೂಲಕ ಪಾಶ್ಚಿಮಾತ್ಯ ಜಗತ್ತಿಗೆ ಭಾರತೀಯ ತತ್ವಶಾಸ್ತ್ರವನ್ನು ಪರಿಚಯಿಸಲು ಸಹಾಯ ಮಾಡಿದರು ಎಂದರು.

ರಾಧಾಕೃಷ್ಣನ್ 1949 ರಿಂದ 1952 ರವರೆಗೆ ಸೋವಿಯತ್ ಒಕ್ಕೂಟಕ್ಕೆ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸಿದರು. 1952 ರಿಂದ 1962 ರವರೆಗೆ ಉಪರಾಷ್ಟ್ರಪತಿಯಾಗಿದ್ದರು.1962 ರಲ್ಲಿ ಭಾರತದ ಎರಡನೇ ರಾಷ್ಟ್ರಪತಿಯಾಗಿ 1967 ರವರೆಗೆ ಸೇವೆ ಸಲ್ಲಿಸಿದರು. ಬುದ್ಧಿವಂತಿಕೆ ಮತ್ತು ಭಾರತೀಯ ಸಂಸ್ಕೃತಿಯ ಬಗ್ಗೆ ಆಳವಾದ ತಿಳಿವಳಿಕೆಗೆ ಹೆಸರುವಾಸಿಯಾಗಿದ್ದರು. ಪರಂಪರೆ, ಭಾರತೀಯ ಶಿಕ್ಷಣ ಮತ್ತು ತತ್ವಶಾಸ್ತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದರು ಎಂದರು. ಶಿಕ್ಷಕ ವೃತ್ತಿ ಉದ್ಯೋಗವಲ್ಲ: ಕಾಲೇಜು ಪ್ರಾಂಶುಪಾಲ ಡಾ.ಪಿ.ದೇವರಾಜು ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರು, ಶಿಕ್ಷಣ ಒಂದು ನಾಣ್ಯದ ಎರಡು ಮುಖ ಇದ್ದಂತೆ. ಶಿಕ್ಷಕರಿಗೆ ಇರಬೇಕಾದ ನೈತಿಕತೆ ಮತ್ತು ಜವಾಬ್ದಾರಿ ರಾಷ್ಟ್ರನಿರ್ಮಾಣಕ್ಕೆ ಯುವಕರನ್ನು ಸಜ್ಜುಗೊಳಿಸುವಂತೆ ಶಿಕ್ಷಣದ ಮಹತ್ವವನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಶಿಕ್ಷಕರು ಹೊಂದಿದ್ದು, ಜವಾಬ್ದಾರಿಗಳನ್ನು ಆತ್ಮಾವಲೋಕನ ಮಾಡಿಕೊಳ್ಳುವ ದಿನ ಇದಾಗಿದೆ ಎಂದರು.

ಶಿಕ್ಷಕ ವೃತ್ತಿ ಉದ್ಯೋಗವಲ್ಲ ನಮ್ಮ ಸಂವಿಧಾನ ಆಶಯ ಮತ್ತು ರಾಷ್ಟ್ರದ ನಿರ್ಮಾಣದಲ್ಲಿ ನಿರ್ಣಾಯ ಪಾತ್ರವಹಿಸುವುದು ಶಿಕ್ಷಕರೇ ಆಗಿದ್ದಾರೆ. ಹಾಗಾಗಿ ಶಿಕ್ಷಕರು ಶಿಕ್ಷಕರ ದಿನದಂದು ತಮ್ಮನ್ನೇ ತಾವೇ ರಾಷ್ಟ್ರನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ರಾಜ್ಯಶಾಸ್ತ್ರ ಉಪನ್ಯಾಸಕಿ ಜಿ.ಸುಮಿತ್ರ, ಅಧ್ಯಾಪಕರಾದ ಸುದರ್ಶನ್, ರವಿಶಂಕರ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿನಿ ಗಿರಿಜಾ ನಿರೂಪಿಸಿದರು. ಅನನ್ಯ ವಂದಿಸಿದರು.5ಸಿಎಚ್ಎನ್‌15ಚಾಮರಾಜನಗರ ತಾಲೂಕಿನ ಭೋಗಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾವಿತ್ರಿ ಬಾಯಿ ಭಾಪುಲೆ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಎಸ್.ಲಿಂಗಣ್ಣ ಉದ್ಘಾಟಿಸಿದರು.