ಭಾರತ ಕಂಡ ಸರ್ವಶ್ರೇಷ್ಠ ಶಿಕ್ಷಕ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್: ಟಿ.ಆರ್.ಸೋಮಶೇಖರಯ್ಯ

| Published : Sep 07 2024, 01:42 AM IST

ಭಾರತ ಕಂಡ ಸರ್ವಶ್ರೇಷ್ಠ ಶಿಕ್ಷಕ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್: ಟಿ.ಆರ್.ಸೋಮಶೇಖರಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ಭಾರತದ ಶಿಕ್ಷಣ ವ್ಯವಸ್ಥೆಗೆ ಅರ್ಥಪೂರ್ಣವಾದ ಚೌಕಟ್ಟು ಕಟ್ಟಿಕೊಟ್ಟ ಶಿಕ್ಷಣ ತಜ್ಞ, ಭಾರತ ಕಂಡ ಸರ್ವಶ್ರೇಷ್ಠ ಶಿಕ್ಷಕರು ಡಾ. ಸರ್ವೆಪಲ್ಲಿ ರಾಧಕೃಷ್ಣನ್ ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಅಧ್ಯಕ್ಷ ಟಿ.ಆರ್. ಸೋಮಶೇಖರಯ್ಯ ಹೇಳಿದರು.

ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಶಾಲೆಯಲ್ಲಿ 137ನೇ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮ ದಿನೋತ್ಸವ

ಕನ್ನಡಪ್ರಭ ವಾರ್ತೆ, ತರೀಕೆರೆ

ಭಾರತದ ಶಿಕ್ಷಣ ವ್ಯವಸ್ಥೆಗೆ ಅರ್ಥಪೂರ್ಣವಾದ ಚೌಕಟ್ಟು ಕಟ್ಟಿಕೊಟ್ಟ ಶಿಕ್ಷಣ ತಜ್ಞ, ಭಾರತ ಕಂಡ ಸರ್ವಶ್ರೇಷ್ಠ ಶಿಕ್ಷಕರು ಡಾ. ಸರ್ವೆಪಲ್ಲಿ ರಾಧಕೃಷ್ಣನ್ ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಅಧ್ಯಕ್ಷ ಟಿ.ಆರ್. ಸೋಮಶೇಖರಯ್ಯ ಹೇಳಿದರು. ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ 137ನೇ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನೋತ್ಸವ ಮತ್ತು 63ನೇ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿಗಳ ಸಮೂಹದಿಂದ ಶಿಕ್ಷಕ ವೃಂದಕ್ಕೆ ನೆನಪಿನ ಕಾಣಿಕೆ ಹಾಗೂ ಕೃತಜ್ಞತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಒಬ್ಬ ಭಾರತೀಯ ತತ್ವಜ್ಞಾನಿ, ರಾಜನೀತಿಜ್ಞ,ಪ್ರಾಧ್ಯಾಪಕ, ರಾಜಕಾರಣಿ. ಅವರು ವಿವಿಧ ವಿದ್ಯಾಲಯಗಳಲ್ಲಿ 40 ವರ್ಷಗಳಿಗೂ ಹೆಚ್ಚು ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹುದ್ದೆ ಅಲಂಕರಿಸಿದ ಮೊದಲ ಭಾರತೀಯ ಎನ್ನುವ ಹೆಗ್ಗಳಿಕೆ. ಭಾರತದ ಮೊದಲ ಉಪರಾಷ್ಟ್ರಪತಿ ಹಾಗೂ ಎರಡನೇ ರಾಷ್ಟ್ರಪತಿ ಯಾಗಿದ್ದರು. ತಮ್ಮ ಜನ್ಮದಿನವನ್ನು ಪ್ರತ್ಯೇಕವಾಗಿ ಆಚರಿಸುವ ಒದಲು ಶಿಕ್ಷಕರ ದಿನವನ್ನಾಗಿ ಆಚರಿಸಿದರೆ ಅದು ನನ್ನ ಭಾಗ್ಯ ಎಂದು ಹೇಳಿದರು. ಇಂದಿಗೂ ಶಿಕ್ಷಕರ ದಿನಾಚರಣೆ ಆಚರಿಸಿಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು. ಶಾಲಾ ಆಡಳಿತಾಧಿಕಾರಿ ಅನೂಪ್ ಮಾತನಾಡಿ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ತಮ್ಮ ಅನುಭವವನ್ನು ಧಾರೆ ಎರೆಯುವ ಮೂಲಕ ಶಿಕ್ಷಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಶ್ರೇಷ್ಠ ಶಿಕ್ಷಕ,ಇವರ ಜನ್ಮದಿನವನ್ನು ಶಿಕ್ಷಕರ ದಿನವೆಂದು ಆಚರಿಸಲಾಗುತ್ತಿದ್ದು, ಸಮಸ್ತ ಶಿಕ್ಷಕರಿಗೆ ಶುಭಾಶಯ ತಿಳಿಸಿದರು. ಶಾಲಾ ಶಿಕ್ಷಕಿ ಜೈನಬ್ ನೆನಪಿನ ಕಾಣಿಕೆ ಸ್ವೀಕರಿಸಿ ಮಾತನಾಡಿ ಶ್ರೇಷ್ಠ ದಾನಗಳಲ್ಲಿ ವಿದ್ಯಾದಾನವೂ ಒಂದು. ಪುಸ್ತಕದ ಅಕ್ಷರ ಜ್ಞಾನವನ್ನು ತಿಳಿ ಹೇಳುವ ಮೂಲಕ ಶಿಕ್ಷಣದ ಮೌಲ್ಯಗಳೊಂದಿಗೆ ಬದುಕಿನ ಪಾಠಗಳನ್ನು ಬೋಧಿಸುತ್ತಾ ಯಾವುದೇ ಅಪೇಕ್ಷೆ ಇಲ್ಲದೆ ವಿದ್ಯಾರ್ಥಿಗಳ ಏಳಿಗೆಗಾಗಿ ಸದಾ ಬಯಸುವ ಗುರುಗಳನ್ನು ಗೌರವಿಸಿ ಎಂದು ತಿಳಿಸಿದರು.ಶಾಲಾ ವಿದ್ಯಾರ್ಥಿಗಳಿಂದ ಶಿಕ್ಷಕಿಯರಿಗೆ ನೆನಪಿನ ಕಾಣಿಕೆ ನೀಡಿ, ಸಿಂಚನ ,ಪ್ರಜ್ಞಾ, ಗಿರೀಶ್ ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಶಾಲಾ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಶಿಕ್ಷಕಿ ವಿದ್ಯಾ, ಶಿಕ್ಷಕಿಯರು, ವಿದ್ಯಾರ್ಥಿಗಳು, ಪೋಷಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

6ಕೆಟಿಆರ್.ಕೆ.28ಃ

ತರೀಕೆರೆಯಲ್ಲಿ ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆಯಲ್ಲಿ ನಡೆದ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವದಲ್ಲಿ ವಿದ್ಯಾ ಸಂಸ್ಥೆ ಅಧ್ಯಕ್ಷ ಟಿ.ಆರ್.ಸೋಮಶೇಖರಯ್ಯ ಮಾತನಾಡಿದರು.