ಸಾರಾಂಶ
ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಭೇಟಿ ನೀಡಿ ಕುಂದುಕೊರತೆಗಳ ಮಾಹಿತಿ ಪಡೆದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ಭೇಟಿ ನೀಡಿ ಆಡಳಿತಾತ್ಮಕ ಕುಂದುಕೊರತೆಗಳ ಕುರಿತು ಮಾಹಿತಿ ಪಡೆದು ಸಲಹೆ ನೀಡಿದರು.ಹಾಗೂ ಇಲಾಖಾ ನಿಯಮಗಳನ್ನು ಅನುಸರಿಸುವ ಮೂಲಕ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಸಾಧಿಸುವ ಬಗ್ಗೆ ಸೂಚನೆ ನೀಡಿದರು. ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಪ್ರತಿ ತಿಂಗಳು ವೈದ್ಯರು ಮತ್ತು ಸಿಬ್ಬಂದಿ ಸಭೆ ನಡೆಸಿ ಉತ್ತಮ ಸೇವೆ ಕಲ್ಪಿಸುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪಾರ್ವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕೃತಾಂಭ, ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಡಾ.ಜಿ.ವಿ.ಶ್ರೀನಾಥ್ ಹಾಗೂ ಡಾ.ರಾಜೀವ್, ಡಾ.ಕಿಶೋರ್, ಪಿಎಚ್‌ಸಿಒ, ಸಿಎಚ್‌ಒ ಶುಶ್ರೂಷಣಾಧಿಕಾರಿಗಳು ಮತ್ತು ಆಶಾ ಕಾರ್ಯಕರ್ತರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.