ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದಿಂದ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ೬ನೇ ದಿನದ ಕಾರ್ಯಕ್ರಮದ ನಡುವೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಪತ್ರಕರ್ತರನ್ನು ಆಶೀರ್ವದಿಸಿ ಸುಮಾರು ಅರ್ಧ ತಾಸು ಚರ್ಚೆ ನಡೆಸಿದರು.

ಭದ್ರಾವತಿ: ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದಿಂದ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ೬ನೇ ದಿನದ ಕಾರ್ಯಕ್ರಮದ ನಡುವೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಪತ್ರಕರ್ತರನ್ನು ಆಶೀರ್ವದಿಸಿ ಸುಮಾರು ಅರ್ಧ ತಾಸು ಚರ್ಚೆ ನಡೆಸಿದರು. ಹಳೇನಗರ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ, ಹಿರಿಯ ಪತ್ರಕರ್ತ ಕಣ್ಣಪ್ಪ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆ ಅಧ್ಯಕ್ಷ ಗಂಗಾನಾಯ್ಕ ಗೊಂದಿ, ಉಪಾಧ್ಯಕ್ಷ ಜಿ.ಸುಭಾಷ್‌ರಾವ್ ಸಿಂಧ್ಯಾ, ಪ್ರಧಾನ ಕಾರ್ಯದರ್ಶಿ ಬಸವರಾಜ, ಕಾರ್ಯದರ್ಶಿ ಅನಂತಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಆರ್.ಬದರಿನಾರಾಯಣ ಶ್ರೇಷ್ಠಿ, ಎಚ್.ಶೈಲೇಶ್ ಕೋಠಿ, ಕೆ.ಆರ್.ಶಂಕರ್, ಕಿರಣ್ ಕುಮಾರ್ ಹಾಗೂ ಸಾಧು ಸದ್ಧರ್ಮ ತಾಲೂಕು ಅಧ್ಯಕ್ಷ ಕೆ.ಜಿ.ರವಿಕುಮಾರ್, ಕೆ.ಜಿ.ರಾಜಕುಮಾರ್, ಸಂಜೀವ್ ಕುಮಾರ್ ಮತ್ತಿತರರಿದ್ದರು.