ಕೊಪ್ಪಳ: ಶರಣ ಸಾಹಿತ್ಯ,ವಚನ ಸಾಹಿತ್ಯಕ್ಕೆ ದೊಡ್ಡ ಕೊಡುಗೆಯನ್ನು ಡಾ.ಸಿದ್ದಯ್ಯ ಪುರಾಣಿಕರು ನೀಡಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಹೇಳಿದರು.
ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲೆಯ ಪ್ರಮುಖ ಸಾಹಿತಿ ಡಾ.ಸಿದ್ದಯ್ಯ ಪುರಾಣಿಕ್ ಜನ್ಮ ದಿನಾಚರಣೆ ಆಚರಿಸಿ ಮಾತನಾಡಿದ ಅವರು, ಡಾ.ಸಿದ್ದಯ್ಯ ಪುರಾಣಿಕ್ ಹೈದ್ರಾಬಾದ್ ಕರ್ನಾಟಕದಲ್ಲಿ ಬಿ.ಎಂ ಶ್ರೀ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರನ್ನು ಕರೆಸಿ ಕನ್ನಡದ ಕಹಳೆ ಮೊಳಗಿಸಿ, ಕನ್ನಡ ವಿಶ್ವಕೋಶ ಯೋಜನೆ, ಕನ್ನಡ ಸಾಹಿತ್ಯ ಪರಿಷತ್ ನಿಘಂಟು ಯೋಜನೆ, ಜೈಮಿನಿ ಭಾರತ, ಹರಶ್ಚಂದ್ರ ಕಾವ್ಯ ಪ್ರಕಟಣೆಯಲ್ಲಿ ಅಮೋಘವಾದ ಕಾರ್ಯ ನಿರ್ವಹಿಸಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.ಜಿಲ್ಲೆಯಲ್ಲಿ ಈಗಾಗಲೇ ಡಾ. ಸಿದ್ದಯ್ಯ ಪುರಾಣಿಕ್ ಟ್ರಸ್ಟ್ ಸ್ಥಾಪನೆಯಾಗಿದ್ದು, 2026-27ನೇ ಸಾಲಿನಲ್ಲಿ ಪುರಾಣಿಕ್ ಸಾಹಿತ್ಯ, ಸಂಶೋಧನೆ ಆಧರಿಸಿ ಕಾರ್ಯಚಟುವಟಿಕೆ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಂ.ಎಸ್.ದೊಡ್ಡಮನಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ತಾಲೂಕು ಅಧಿಕಾರಿ ಯಮನೂರಪ್ಪ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಹಾಗೂ ಮತ್ತಿತರರಿದ್ದರು.