ಸಾರಾಂಶ
ಉಡುಪಿ ಜಿಲ್ಲಾ ಕಾಂಗ್ರೆಸ್ ಕಾಂಗ್ರೆಸ್ ಭವನದಲ್ಲಿ ಡಾ.ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಡಾ.ಮನಮೋಹನ್ ಸಿಂಗ್ ಅವರ ಪ್ರಾಮಾಣಿಕತೆ ಮತ್ತು ಆರ್ಥಿಕ ಚಿಂತನೆಗಳು ಸದಾ ಭಾರತದ ರಾಜಕೀಯ ಹಾಗೂ ಆರ್ಥಿಕ ಇತಿಹಾಸದಲ್ಲಿ ಚಿರಾಯುವಾಗಿರುತ್ತದೆ ಎಂದು ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು.ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾಂಗ್ರೆಸ್ ಭವನದಲ್ಲಿ ನಡೆದ ಡಾ.ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಬಡತನದಿಂದ ಬಂದು ದೇಶದ ಅತ್ಯುನ್ನತ ಹುದ್ದೆ ಹಿಡಿದವರು ಡಾ.ಮನಮೋಹನ್ ಸಿಂಗ್. ದೇಶದ ಬಡತನ ನಿವಾರಣೆಗೆ ಸಂಕಲ್ಪ ತೊಟ್ಟು ಬಡ ಕುಟುಂಬಗಳನ್ನು ಆರ್ಥಿಕವಾಗಿ ಸದೃಢಗೊಳಿಸುವ ಯೋಜನೆಗಳನ್ನು ಜಾರಿಗೊಳಿಸಿದರು. ನರಸಿಂಹ ರಾವ್ ಅವರ ಸರ್ಕಾರದಲ್ಲಿ ವಿತ್ತ ಸಚಿವರಾಗಿ, ಕೇಂದ್ರ ಸರ್ಕಾರದ ಆರ್ಥಿಕ ಸಲಹೆಗಾರರಾಗಿ, ಯುಜಿಸಿ ಅಧ್ಯಕ್ಷರಾಗಿ, ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಸೇವೆ ಸಲ್ಲಿಸಿದ ಕೀರ್ತಿ ಅವರದ್ದು ಎಂದರು.ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಎಂ.ಎ. ಗಪೂರ್, ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಪಕ್ಷದ ಮುಖಂಡರಾದ ಉದಯಕುಮಾರ್ ಶೆಟ್ಟಿ ಮುನಿಯಾಲು, ಮಹಿಳಾ ಅಧ್ಯಕ್ಷೆ ಗೀತಾ ವಾಗ್ಳೆ, ಉಡುಪಿ ಬ್ಲಾಕ್ ಅದ್ಯಕ್ಷ ರಮೇಶ್ ಕಾಂಚನ್, ಹರೀಶ್ ಕಿಣಿ, ಸುರೇಶ್ ಶೆಟ್ಟಿ ಬನ್ನಂಜೆ, ಶಬ್ಬೀರ್ ಅಹ್ಮದ್, ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ವಂದಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))