ರಾಜ್ಯದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ವಿಬು ಭಖ್ರು ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು:
ರಾಜ್ಯದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ವಿಬು ಭಖ್ರು ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನಿರ್ಗಮಿತ ರಾಜ್ಯಪಾಲರಾದ ಥಾವರ್ಚಂದ್ ಗೆಹಲೋತ್, ಸಿಎಂ ಡಿ.ಕೆ. ಶಿವಕುಮಾರ್, ಡಿಸಿಎಂ ಡಾ. ಜಿ. ಪರಮೇಶ್ವರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಪ್ರವಾಸೋದ್ಯಮ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ತಿನ ಪ್ರತಿ ಪಕ್ಷದ ನಾಯಕರಾದ ಛಲವಾದಿ ಟಿ.ನಾರಾಯಣಸ್ವಾಮಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಸೇರಿ ಉಭಯ ಸದನಗಳ ಸದಸ್ಯರು, ರಾಜ್ಯಸಭೆ ಮತ್ತು ಲೋಕಸಭೆ ಸಂಸದರು,ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಮಾಣ ವಚನ ಸ್ವೀಕಾರದ ನಂತರ ನಿರ್ಗಮಿತ ರಾಜ್ಯಪಾಲರಾದ ಗೆಹಲೋತ್, ಸಿಎಂ ಡಿ.ಕೆ.ಶಿವಕುಮಾರ್, ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಿಬು ಭಕ್ರು ಅವರು ರಾಜ್ಯಪಾಲ ಸುಧಾ ಯಾದವ್ ಅವರಿಗೆ ಪುಷ್ಪಗುಚ್ಛ ನೀಡಿ ಶುಭ ಕೋರಿದರು.ವಂದೇ ಮಾತರಂ ಪೂರ್ಣ ಗೀತೆ:
ಕಾರ್ಯಕ್ರಮದ ಆರಂಭ ಹಾಗೂ ಕೊನೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಲಾಯಿತು. 15 ನಿಮಿಷಗಳಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಕ್ತಾಯವಾಯಿತು.2ನೇ ಮಹಿಳಾ ಗವರ್ನರ್:
ಡಾ.ಸುಧಾ ಯಾದವ್ ಅವರು ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲರಾಗಿ ಅಧಿಕಾರ ಅಲಂಕರಿಸಿದ್ದು, ಈ ಹಿಂದೆ 1999ರಲ್ಲಿ ವಿ.ಎಸ್. ರಮಾದೇವಿ ಅವರು ರಾಜ್ಯದ ಮೊದಲ ಮಹಿಳಾ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.