ಡಾ. ಸುಧಾಕರ್‌ ಗೆಲವಿಗೆ ಶ್ರಮಿಸುವೆವು: ಅನುರೆಡ್ಡಿ

| Published : Mar 30 2024, 12:48 AM IST

ಡಾ. ಸುಧಾಕರ್‌ ಗೆಲವಿಗೆ ಶ್ರಮಿಸುವೆವು: ಅನುರೆಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ಹೊಸಕೋಟೆ: ಮಹಿಳಾ ಸಬಲೀಕರಣದ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ಯೋಜನೆಗಳನ್ನ ಜಾರಿಗೊಳಿಸಿದ್ದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರ ಪಾತ್ರ ಮುಖ್ಯ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅನುರೆಡ್ಡಿ ತಿಳಿಸಿದರು.

ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಆಯ್ಕೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಅವರಿಂದ ನೇಮಕಾತಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಹೊಸ ಯೋಜನೆಗಳನ್ನ ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸುವ ದೃಷ್ಟಿಯಿಂದ ಅವಿರತ ಶ್ರಮಿಸಿದ್ದಾರೆ. ಪ್ರಮುಖವಾಗಿ ಮಹಿಳೆಯರು ಹಾಗೂ ಮಕ್ಕಳ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿ ಕೆಲಸ ಮಾಡಿದ್ದಾರೆ. ಅವರ ಒಂದೊಂದು ಅಭಿವೃದ್ಧಿ ಪೂರಕ ಯೋಜನೆಗಳು ದೇಶದ ಪ್ರತಿ ಮತದಾರರಿಗೆ ತಿಳಿಸುವ ಮೂಲಕ ಮಹಿಳೆಯರು ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದರು.

ಸುಧಾಕರ್ ಗೆಲವಿಗೆ 8 ತಾಲೂಕಲ್ಲೂ ಪ್ರಚಾರ:

ನಾನು ಬೆಂಗಳೂರು ಗ್ರಾಮಾಂತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಆದರೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಅವರನ್ನ ಗೆಲ್ಲಿಸುವ ದೃಷ್ಟಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎಂಟು ತಾಲೂಕುಗಳಲ್ಲಿ ಪಕ್ಷ ಸಂಘಟನೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಯೋಜನೆಗಳನ್ನ ತಲುಪಿಸುವ ದೃಷ್ಟಿಯಿಂದ ಮಹಿಳಾ ಸಂಘಟನೆ ಮಾಡುವುದಾಗಿ ತಿಳಿಸಿದರು.

ಫೋಟೋ : 29 ಹೆಚ್‌ಎಸ್‌ಕೆ 2

ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹೊಸಕೋಟೆ ತಾಲೂಕಿನ ದುನ್ನಸಂದ್ರ ಅನುರೆಡ್ಡಿರವರು ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಅವರಿಂದ ನೇಮಕಾತಿ ಪತ್ರವನ್ನು ಸ್ವೀಕರಿಸಿದರು.