ಸಾರಾಂಶ
ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ. ಕೆ.ಸುಧಾಕರ್ ಚುನಾಯಿತರಾಗಿದ್ದಕ್ಕೆ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಶಾಮಪ್ಪ ಹಾಗೂ ಜಿ.ಚಂದ್ರಣ್ಣ ಅಭಿನಂದಿಸಿದ್ದಾರೆ. ಈ ವೇಳೆ ಮಾತನಾಡಿದ ನಾಯಕು, ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿದ್ದರಿಂದಲೇ ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳನ್ನು ಗೆಲ್ಲಲು ಕಾರಣವಾಯಿತು. ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ಮೇಲೆ ಮಾಡಿದ ಎಲ್ಲ ಆರೋಪಗಳು ಶಾಪವಾಗದೆ ವರವಾಗಿವೆ. ನೂತನ ಸಂಸದ ಸುಧಾಕರ್ ಮೇಲೆ ಸಾಕಷ್ಟು ಜವಾಬ್ದಾರಿಗಳಿವೆ. ಬಯಲು ಸೀಮೆಗೆ ಶಾಶ್ವತ ಕುಡಿಯುವ ನೀರು ಸರಬರಾಜು ಮಾಡಲು ಯೋಜನೆ, ಆಂಧ್ರ ಗಡಿಯವರೆಗೆ ಬಂದಿರುವ ಕೃಷ್ಣಾ ನದಿ ನೀರು ಹರಿಸಲು ಕ್ರಮ ಕೈಗೊಳ್ಳುವುದು, ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿರುವ ಮೆಟ್ರೋ ರೈಲು ದೇವನಹಳ್ಳಿ ಮೂಲಕ ಚಿಕ್ಕಬಳ್ಳಾಪುರದ ಈಶ ದೇವಾಲಯದವರೆಗೂ ವಿಸ್ತರಣೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. (ಫೋಟೋ ಕ್ಯಾಫ್ಷನ್)
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರ ಅಭೂತಪೂರ್ವ ಗೆಲುವಿಗೆ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಶಾಮಪ್ಪ ಹಾಗೂ ಜಿ.ಚಂದ್ರಣ್ಣ ಶುಭ ಹಾರೈಸಿದರು. ಮೈತ್ರಿಕೂಟದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.