ಗದಗ: ಗದುಗಿನ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಡಾ. ಸುರೇಶ್ ವಿ. ನಾಡಗೌಡರ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನೇಮಕಗೊಳಿಸಿದ್ದಾರೆ.
ಗುರುವಾರ ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಕುಲಪತಿ ಪ್ರೊ. ಡಾ. ಸುರೇಶ್ ವಿ. ನಾಡಗೌಡರ ಅವರು, ಈ ನೇಮಕವನ್ನು ತಮ್ಮ ಜೀವನದ ಅತ್ಯುನ್ನತ ಗೌರವ ಹಾಗೂ ಮಹತ್ತರ ಜವಾಬ್ದಾರಿಯಾಗಿದೆ. ಮಹತ್ತರ ಹೊಣೆಗಾರಿಕೆಯನ್ನು ವಹಿಸುವ ಅವಕಾಶ ಕಲ್ಪಿಸಿದ ರಾಜ್ಯಪಾಲರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.ಬಿಎಲ್‌ಒಗಳ ಮೇಲೆ ಅನಗತ್ಯ ಒತ್ತಡ ಸರಿಯಲ್ಲಶಿರಹಟ್ಟಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಮೇಲೆ ಅನಗತ್ಯ ಒತ್ತಡ ಹೇರುವುದು ಸರಿಯಾದ ಕ್ರಮವಲ್ಲ ಎಂದು ನೀಲುಬಾಯಿ ವಿವಿಧೋದ್ದೇಶಗಳ ಸೇವಾ ಸಂಸ್ಥೆ ಹಾಗೂ ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಕೆ. ಲಮಾಣಿ ತಿಳಿಸಿದರು.ಬಿಎಲ್‌ಒಗಳು ಗುರುವಾರ ಮನೆ ಮನೆಗೆ ಎನುಮರೇಷನ್ ಫಾರ್ಮ್ ವಿತರಣೆಗೆ ಆಗಮಿಸಿದ ವೇಳೆ ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಸಮಲೋಚನೆ ನಡೆಸಿದ ಅವರು, ಬಿಎಲ್‌ಒಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಕಾರ್ಯನಿರ್ವಹಿಸುವ ಸಿಬ್ಬಂದಿಯಾಗಿದ್ದು, ಅವರಿಗೆ ಅಗತ್ಯ ಸೌಲಭ್ಯ, ಸಹಕಾರ ಮತ್ತು ಸಮಯ ನೀಡಬೇಕು ಎಂದರು.ಬಿಎಲ್‌ಒಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಕಾರ್ಯನಿರ್ವಹಿಸುತ್ತಿದ್ದು, ಮತದಾರರ ವಿವರಗಳ ಸಂಗ್ರಹ, ಹೊಸ ಹೆಸರು ಸೇರ್ಪಡೆ, ಮೃತರ ಹೆಸರು ಕೈಬಿಡುವುದು ಹಾಗೂ ವಿಳಾಸ ತಿದ್ದುಪಡಿ ಕಾರ್ಯಗಳನ್ನು ನಿಯಮಾನುಸಾರ ಮಾಡುತ್ತಿದ್ದು, ಇವರ ಮೇಲೆ ಅನಗತ್ಯ ಒತ್ತಡ ಹೇರಬಾರದು ಎಂದರು.