ಡಾ.ತಲ್ಲೂರುಗೆ ಬಂಟಕುಲ ರತ್ನ ಬಿರುದು ಪ್ರದಾನ, ಸನ್ಮಾನ

| Published : Sep 03 2024, 01:32 AM IST

ಡಾ.ತಲ್ಲೂರುಗೆ ಬಂಟಕುಲ ರತ್ನ ಬಿರುದು ಪ್ರದಾನ, ಸನ್ಮಾನ
Share this Article
  • FB
  • TW
  • Linkdin
  • Email

ಸಾರಾಂಶ

ಜಾನಪದ, ರಂಗಭೂಮಿ, ಸಾಂಸ್ಕೃತಿ, ಧಾರ್ಮಿಕ ಮೊದಲಾದ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಕ್ರೀಯರಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಖ್ಯಾತರಾಗಿರುವ ಕರ್ನಾಟಕ ಯ್ಷಕಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ಬಂಟಕುಲ ರತ್ನ’ ಬಿರುದು ನೀಡಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘ ಇದರ ಉಡುಪಿ ತಾಲೂಕು ಸಮಿತಿ ವತಿಯಿಂದ ಜಾನಪದ, ರಂಗಭೂಮಿ, ಸಾಂಸ್ಕೃತಿ, ಧಾರ್ಮಿಕ ಮೊದಲಾದ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಕ್ರೀಯರಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಖ್ಯಾತರಾಗಿರುವ ಕರ್ನಾಟಕ ಯ್ಷಕಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ಬಂಟಕುಲ ರತ್ನ’ ಬಿರುದು ನೀಡಿ ಸನ್ಮಾನಿಸಲಾಯಿತು.ಸಮಿತಿ ವತಿಯಿಂದ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಭಾನುವಾರ ನಡೆದ ಕಲಾಧರ ಯಕ್ಷರಂಗ ಬಳಗ ಜಲವಳ್ಳಿ ಇವರಿಂದ ಬಡಗುತಿಟ್ಟು ಯಕ್ಷಗಾನ ‘ಜ್ವಾಲಾ ಪ್ರತಾಪ’ ಪ್ರದರ್ಶನದ ಸಂದರ್ಭದಲ್ಲಿ ಈ ಸನ್ಮಾನ ನಡೆಯಿತು.ಈ ಸಂದರ್ಭ ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘದ ಉಡುಪಿ ತಾಲೂಕು ಸಮಿತಿ ಸಂಚಾಲಕ ಶಿವಪ್ರಸಾದ್ ಹೆಗ್ಡೆ, ಉಪ ಸಂಚಾಲಕ ದಿನೇಶ್ ಹೆಗ್ಡೆ, ನಿಕಟ ಪೂರ್ವ ಸಂಚಾಲಕ ಜಯರಾಜ್ ಹೆಗ್ಡೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಭುಜಂಗ ಶೆಟ್ಟಿ, ಮಿಥುನ್ ಹೆಗ್ಡೆ, ಸುಭಾಸ್ ಬಲ್ಲಾಳ್, ಶ್ರೀಧರ ಶೆಟ್ಟಿ, ಇಂದಿರಾ ಸುಬ್ಬಯ್ಯ ಹೆಗ್ಡೆ, ನಿತೀಶ್ ಕುಮಾರ್ ಶೆಟ್ಟಿ, ಹರೀಶ್ ಚೆರ್ಕಾಡಿ, ಕಿಶೋರ್ ಶೆಟ್ಟಿ, ಪ್ರಸಾದ್ ಮಾರಾಳ್ಳಿ, ನಿರುಪಮಾ ಹೆಗ್ಡೆ ಹಾಗೂ ಗಿರಿಜಾ ತಲ್ಲೂರು ಶಿವರಾಮ ಶೆಟ್ಟಿ ಅವರು ಉಪಸ್ಥಿತರಿದ್ದರು.