ಡಾ. ವಿ.ಕೃ. ಗೋಕಾಕ ರಾಷ್ಟ್ರೀಯ ಸ್ಮಾರಕ ಟ್ರಸ್ಟ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ.ವಿ.ಕೃ. ಗೋಕಾಕ ರಾಷ್ಟ್ರೀಯ ಸ್ಮಾರಕ ಟ್ರಸ್ಟ ನೂತನ ಅಧ್ಯಕ್ಷರು ಹಾಗೂ ಸದಸ್ಯರ ಸ್ವಾಗತ ಹಾಗೂ ಅಧಿಕಾರ ಸ್ವೀಕಾರ ಕಾರ್ಯಕ್ರಮ ಜರುಗಿತು.
ಹಾವೇರಿ: ಡಾ. ವಿ.ಕೃ. ಗೋಕಾಕ ರಾಷ್ಟ್ರೀಯ ಸ್ಮಾರಕ ಟ್ರಸ್ಟ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ.ವಿ.ಕೃ. ಗೋಕಾಕ ರಾಷ್ಟ್ರೀಯ ಸ್ಮಾರಕ ಟ್ರಸ್ಟ ನೂತನ ಅಧ್ಯಕ್ಷರು ಹಾಗೂ ಸದಸ್ಯರ ಸ್ವಾಗತ ಹಾಗೂ ಅಧಿಕಾರ ಸ್ವೀಕಾರ ಕಾರ್ಯಕ್ರಮ ಜರುಗಿತು.ಟ್ರಸ್ಟ್ ಅಧ್ಯಕ್ಷ ಡಾ. ಸತೀಶ ಕುಲಕರ್ಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವಲಯ ವಿಭಾಗದ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರು, ಧಾರವಾಡ ದ.ರಾ. ಬೇಂದ್ರ ಟ್ರಸ್ಟ್ ಅಧ್ಯಕ್ಷ ಸರಜೂ ಕಾಟಕರ, ಹಾವೇರಿ ವಿಶ್ವವಿದ್ಯಾಲಯ ಕುಲಪತಿ ಸುರೇಶ ಜಂಗಮಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ಸಂಜೀವಕುಮಾರ ನೀರಲಗಿ, ಟ್ರಸ್ಟ್ ಸದಸ್ಯರಾದ ಪ್ರೊ.ಮಾರುತಿ ಶಿಡ್ಲಾಪೂರ, ಗುರುರಾಜ ನಾಡಿಗೇರ, ಲಿಂಗರಾಜ ಸೊಟ್ಟಪ್ಪನವರ, ಡಾ.ಜಗನ್ನಾಥ ಗೇನಣ್ಣನವರ, ಪುಷ್ಪಾ ಶಲವಡಿಮಠ ಹಾಗೂ ಇತರರು ಇದ್ದರು. ಟ್ರಸ್ಟ ಸದಸ್ಯ ಕಾರ್ಯದರ್ಶಿ ವೀರಯ್ಯಸ್ವಾಮಿ ಹಿರೇಮಠ ಸ್ವಾಗತಿಸಿ, ವಂದಿಸಿದರು.