ಸಾರಾಂಶ
ತುಂಗಭದ್ರಾ ಅಣೆಕಟ್ಟು ನಿಮಾರ್ಣದ ಪೂರ್ವದಲ್ಲಿ ವಿಜಯನಗರ ಅರಸರ ಕಾಲದಿಂದಲೂ ರಾಯ, ಬಸವ, ತುರ್ತಾ, ಕಾಳಕಟ್ಟ ಕಾಲುವೆಗಳು ನಿರಂತರ ನೀರು ಒದಗಿಸುವ ಮೂಲಕ ಈ ಭಾಗದ ರೈತರು ಜನ- ಜಾನುವಾರುಗಳಿಗೆ ಆಶ್ರಯವಾಗಿದ್ದವು. ತುಂಗಭದ್ರಾ ಅಣೆಕಟ್ಟುಗಳು ನಿರ್ಮಾಣದ ನಂತರವೂ ವರ್ಷ ೧೧ ತಿಂಗಳು ನೀರು ಬಿಡುವ ಮೂಲಕ ಈ ಭಾಗದ ರೈತರ ಜೀವನಾಡಿಯಾಗಿದ್ದು, ಈ ವರ್ಷ ಈಗಾಗಲೇ ಕಾಲುವೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಇದರಿಂದ ಈ ಭಾಗದ ರೈತರು ಹಾಗೂ ಜನ ಜಾನುವಾರು ಸೇರಿದಂತೆ ರೈತರ ಬೆಳೆಗಳಿಗೂ ನೀರು ಸಿಗದೇ ತೊಂದರೆಯಾಗಿದೆ.
ಕನ್ನಡಪ್ರಭ ವಾರ್ತೆ ಹೊಸಪೇಟೆ
ಪುರಾತನ ವಿಜಯನಗರ ಕಾಲುವೆಗಳಿಗೆ ವರ್ಷದ ೧೧ ತಿಂಗಳ ಕಾಲ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೊಸಪೇಟೆ ರೈತ ಸಂಘದ ನೇತೃತ್ವದಲ್ಲಿ ನಗರದ ತಹಸೀಲ್ದಾರ್ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.ನಗರದ ರೈತ ಭವನದ ಆವರಣದಿಂದ ಆರಂಭವಾದ ರೈತರ ಪ್ರತಿಭಟನೆ ಮೆರವಣಿಗೆಗೆ ಶಾಸಕ ಎಚ್.ಆರ್. ಗವಿಯಪ್ಪ ಚಾಲನೆ ನೀಡಿದರು. ಬಳಿಕ ಮೆರವಣಿಗೆ ಮೂಲಕ ತಹಸೀಲ್ದಾರ್ ಕಚೇರಿಗೆ ಆಗಮಿಸಿದ ರೈತರು, ಮೂರು ದಿನಗಳ ಕಾಲ ಸಂಕೇತಿಕ ಧರಣಿ ಆರಂಭಿಸಿದರು.
ತುಂಗಭದ್ರಾ ಅಣೆಕಟ್ಟು ನಿಮಾರ್ಣದ ಪೂರ್ವದಲ್ಲಿ ವಿಜಯನಗರ ಅರಸರ ಕಾಲದಿಂದಲೂ ರಾಯ, ಬಸವ, ತುರ್ತಾ, ಕಾಳಕಟ್ಟ ಕಾಲುವೆಗಳು ನಿರಂತರ ನೀರು ಒದಗಿಸುವ ಮೂಲಕ ಈ ಭಾಗದ ರೈತರು ಜನ- ಜಾನುವಾರುಗಳಿಗೆ ಆಶ್ರಯವಾಗಿದ್ದವು. ತುಂಗಭದ್ರಾ ಅಣೆಕಟ್ಟುಗಳು ನಿರ್ಮಾಣದ ನಂತರವೂ ವರ್ಷ ೧೧ ತಿಂಗಳು ನೀರು ಬಿಡುವ ಮೂಲಕ ಈ ಭಾಗದ ರೈತರ ಜೀವನಾಡಿಯಾಗಿದ್ದು, ಈ ವರ್ಷ ಈಗಾಗಲೇ ಕಾಲುವೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಇದರಿಂದ ಈ ಭಾಗದ ರೈತರು ಹಾಗೂ ಜನ ಜಾನುವಾರು ಸೇರಿದಂತೆ ರೈತರ ಬೆಳೆಗಳಿಗೂ ನೀರು ಸಿಗದೇ ತೊಂದರೆಯಾಗಿದೆ. ಕೂಡಲೇ ನೀರು ಹರಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರೈತ ಮುಖಂಡ ಗೋಸಲ ಭರಮಪ್ಪ ಅವರು, ಅನೇಕ ಬಾರಿ ಮೌಖಿಕವಾಗಿ ಹೇಳಿದರೂ ಸರ್ಕಾರ ಕಿವಿಗೊಡುತ್ತಿಲ್ಲ ಎಂದು ಸರ್ಕಾರದ ಕ್ರಮವನ್ನು ಖಂಡಿಸಿದರು,
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಂ.ಜಿ. ಚೋಗಯ್ಯ, ಎ. ಪರಸಪ್ಪ, ಸಿ. ಹಾಶಾಂ, ಜೆ. ಗಾದಿಲಿಂಗಪ್ಪ, ಸಿ. ಅಂಜಿನೆಪ್ಪ, ಬಂಡೆ ಶ್ರೀನಿವಾಸ, ಕಿಚಡಿ ಶ್ರೀನಿವಾಸ, ಆರ್. ಕೊಟ್ರೇಶ್, ಉತ್ತಂಗಿ ಕೊಟ್ರೇಶ್, ಎಲ್.ಎಸ್. ಆನಂದ್, ಕಟಗಿ ರಾಮಕೃಷ್ಣ, ರಾಮಚಂದ್ರಗೌಡ, ಗುಜ್ಜಲ ನಾಗರಾಜ್, ಜೆ. ವಸಂತ, ಸೇರಿದಂತೆ ರೈತರು ಪಾಲ್ಗೊಂಡಿದ್ದರು.