ಅಚ್ಚುಕಟ್ಟು ಪ್ರದೇಶಕ್ಕೆ ವಿವಿ ಸಾಗರದಿಂದ ನೀರು ಹರಿಸಿ

| Published : Sep 21 2024, 01:48 AM IST

ಅಚ್ಚುಕಟ್ಟು ಪ್ರದೇಶಕ್ಕೆ ವಿವಿ ಸಾಗರದಿಂದ ನೀರು ಹರಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ವಿವಿ ಸಾಗರ ಜಲಾಶಯದಿಂದ ತಾಲೂಕಿನ ಅಚ್ಚುಕಟ್ಟು ಪ್ರದೇಶಕ್ಕೆ ಎಡ ಮತ್ತು ಬಲ ನಾಲೆ ಕಾಲುವೆಗಳ ಮುಖಾಂತರ ನೀರು ಹರಿಸಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಶುಕ್ರವಾರ ವಿಶ್ವೇಶ್ವರಯ್ಯ ವಿಭಾಗದ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಹಿರಿಯೂರು

ವಿವಿ ಸಾಗರ ಜಲಾಶಯದಿಂದ ತಾಲೂಕಿನ ಅಚ್ಚುಕಟ್ಟು ಪ್ರದೇಶಕ್ಕೆ ಎಡ ಮತ್ತು ಬಲ ನಾಲೆ ಕಾಲುವೆಗಳ ಮುಖಾಂತರ ನೀರು ಹರಿಸಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಶುಕ್ರವಾರ ವಿಶ್ವೇಶ್ವರಯ್ಯ ವಿಭಾಗದ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ತಾಲೂಕಿನಾದ್ಯಂತ ಮುಂಗಾರು ಮಳೆ ಬಾರದೇ ಇರುವುದರಿಂದ ಅಚ್ಚುಕಟ್ಟು ಪ್ರದೇಶದ ತೆಂಗು, ಅಡಿಕೆ, ಬಾಳೆ, ಪಪ್ಪಾಯಿ, ದಾಳಿಂಬೆ ಮುಂತಾದ ತೋಟಗಾರಿಕೆ ಬೆಳೆಗಳು ಹಾಗೂ ಅಲ್ಪಾವಧಿ ಬೆಳೆಗಳು ಒಣಗುತ್ತಿದ್ದು, ಮಳೆ ಇಲ್ಲದೆ ಅಂತರ್ಜಲ ಬತ್ತಿ ಬೋರ್ ವೆಲ್ ಗಳಲ್ಲೂ ನೀರಿಲ್ಲದಂತಾಗಿದೆ ಎಂದು ರೈತರು ತಮ್ಮ ನೋವು ತೋಡಿಕೊಂಡರು.

ಜಲಾಶಯದಲ್ಲಿ 119 ಅಡಿಗಿಂತ ಹೆಚ್ಚಿನ ನೀರಿದ್ದು ಕಾಲುವೆಗಳಿಗೆ ನೀರು ಹರಿಸುವುದರಿಂದ ನೀರಿನ ಅಭಾವವೂ ಉಂಟಾಗುವುದಿಲ್ಲ. ಆದ್ದರಿಂದ ತೋಟಗಾರಿಕೆ ಮತ್ತು ಇತರೆ ಬೆಳೆಗಳಿಗೆ ವಿವಿ ಸಾಗರದ ಎಡ ಮತ್ತು ಬಲ ನಾಲೆಗಳ ಮುಖಾಂತರ ನೀರು ಹರಿಸಿ ರೈತರ ನೆರವಿಗೆ ನಿಲ್ಲಬೇಕು ಎಂದು ರೈತ ಸಂಘ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆಸಿ. ಹೊರಕೇರಪ್ಪ, ತಾಲೂಕು ಅಧ್ಯಕ್ಷ ಬಿಓ ಶಿವಕುಮಾರ್, ಯುವ ಘಟಕದ ಅಧ್ಯಕ್ಷ ಚೇತನ್ ಯಳನಾಡು, ಕಾರ್ಯಾಧ್ಯಕ್ಷ ದಸ್ತಗೀರ್ ಸಾಬ್, ಕೆ. ಸುಬ್ರಮಣಿ, ದಾದಾಪೀರ್, ಚಿಕ್ಕತಿಮ್ಮಯ್ಯ, ಅನ್ಸರ್ ಅಲಿ, ನಿತ್ಯಶ್ರೀ, ಎಂ.ಆರ್ ಪುಟ್ಟಸ್ವಾಮಿ, ಬಿ.ಪಿ ಉಮಾಪತಿ, ನಾಗರಾಜ್, ರವೀಂದ್ರ ನಾಥ್, ರಮೇಶ್, ಪೀರ್ ಸಾಬ್ ಮುಂತಾದವರು ಹಾಜರಿದ್ದರು.