ಸಾರಾಂಶ
ಹಿಂದೂ ಧಾರ್ಮಿಕ ನಂಬಿಕೆ ಮೇಲೆ ನಡೆದ ಪ್ರಾಯೋಜಿತ ದಾಳಿ ಎಂಬುದೀಗ ಬಹಿರಂಗಗೊಂಡಿದೆ. ಕಾಂಗ್ರೆಸ್ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ಹಿನ್ನೆಲೆ- ಮುನ್ನೆಲೆ ಯೋಚಿಸದೆ, ಸೂಕ್ತ ಪರಿಶೀಲನೆ ಮಾಡದೇ ಮುಸುಕುಧಾರಿ ಹೇಳಿದ್ದಕ್ಕೆಲ್ಲ ತಲೆ ಅಲ್ಲಾಡಿಸಿ ತನ್ನ ನಿಜ ಸ್ವರೂಪವನ್ನು ಪ್ರದರ್ಶಿಸಿದ್ದು, ಐತಿಹಾಸಿಕ ದುರಂತ.
ಹುಬ್ಬಳ್ಳಿ:
ಧರ್ಮಸ್ಥಳ ಪ್ರಕರಣದಲ್ಲಿ ''''ಪವಿತ್ರ ಕ್ಷೇತ್ರಕ್ಕೆ ಮಸಿ ಬಳಿದ ಬಳಿಕ ಸರ್ಕಾರ ಆರೋಪಿಗಳನ್ನು ಬಂಧಿಸುವ ನಾಟಕವಾಡಿದೆ'''' ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಕರಣದಲ್ಲಿ ಸರ್ಕಾರ ಆರಂಭದಲ್ಲೇ ಎಡವಿದೆ. ಹಾಗಾಗಿ ಇಷ್ಟೆಲ್ಲಾ ರಾದ್ಧಾಂತವಾಗಿದೆ. ಇದಕ್ಕೆಲ್ಲ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಹೊರಬೇಕು ಎಂದು ಆಗ್ರಹಿಸಿದ್ದಾರೆ.
ಜನರ ಧಾರ್ಮಿಕ ನಂಬಿಕೆಯ, ಪವಿತ್ರ ಕ್ಷೇತ್ರದ ಹೆಸರು ಹಾಳು ಮಾಡಿದ ಮೇಲೆ ಸರ್ಕಾರ ಆರೋಪಿಗಳನ್ನು ಬಂಧಿಸುವ ನಾಟಕವಾಡುತ್ತಿದೆ. ಸರ್ಕಾರದ ನಡೆಯಿಂದ ಸರ್ವ ಸಮುದಾಯದವರಿಗೂ ನೋವಾಗಿದೆ. ಅಸಂಖ್ಯಾತ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಸಚಿವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.ಪ್ರಾಯೋಜಿತ ದಾಳಿ:
ಇದು ಹಿಂದೂ ಧಾರ್ಮಿಕ ನಂಬಿಕೆ ಮೇಲೆ ನಡೆದ ಪ್ರಾಯೋಜಿತ ದಾಳಿ ಎಂಬುದೀಗ ಬಹಿರಂಗಗೊಂಡಿದೆ. ಕಾಂಗ್ರೆಸ್ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ಹಿನ್ನೆಲೆ- ಮುನ್ನೆಲೆ ಯೋಚಿಸದೆ, ಸೂಕ್ತ ಪರಿಶೀಲನೆ ಮಾಡದೇ ಮುಸುಕುಧಾರಿ ಹೇಳಿದ್ದಕ್ಕೆಲ್ಲ ತಲೆ ಅಲ್ಲಾಡಿಸಿ ತನ್ನ ನಿಜ ಸ್ವರೂಪವನ್ನು ಪ್ರದರ್ಶಿಸಿದ್ದು, ಐತಿಹಾಸಿಕ ದುರಂತ ಎಂದು ಖಂಡಿಸಿದ್ದಾರೆ.ಕಾಣದ ಕೈಗಳಿಂದ ಉದ್ದೇಶಪೂರ್ವಕ ಪ್ರಯತ್ನ ನಡೆದಿದೆಯಾ? ಯಾರ ಆಜ್ಞೆಯ ಮೇರೆಗೆ ಇಂತಹ ದುಸ್ಸಾಹಸಕ್ಕೆ ಕೈಹಾಕಲಾಯಿತು? ಪ್ರಕರಣದಲ್ಲಿ ಸತ್ಯಾಸತ್ಯಗಳು ಕಣ್ಣೆದುರೇ ಇದ್ದರೂ, ಕಾಂಗ್ರೆಸ್ ಸರ್ಕಾರ ಏಕೆ ಮೌನವಹಿಸಿದೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರ ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಹೊಣೆಗಾರಿಕೆ ಹೊರಬೇಕು ಎಂದು ಆಗ್ರಹಿಸಿದ್ದಾರೆ.