ಉಡುಪಿ: ರಂಗಭೂಮಿ ಉಡುಪಿ ವತಿಯಿಂದ ‘ರಂಗಭೂಮಿ ರಂಗ ಶಿಕ್ಷಣ’ ಅಭಿಯಾನದಲ್ಲಿ ತಯಾರಾದ 11 ಕಿರು ನಾಟಕಗಳ ಪ್ರದರ್ಶನ ‘ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ’ ಡಿ.29 ಮತ್ತು ಡಿ.30ರಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಉಡುಪಿ: ರಂಗಭೂಮಿ ಉಡುಪಿ ವತಿಯಿಂದ ‘ರಂಗಭೂಮಿ ರಂಗ ಶಿಕ್ಷಣ’ ಅಭಿಯಾನದಲ್ಲಿ ತಯಾರಾದ 11 ಕಿರು ನಾಟಕಗಳ ಪ್ರದರ್ಶನ ‘ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ’ ಡಿ.29 ಮತ್ತು ಡಿ.30ರಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ನಗರದ ಆಯ್ದ 11 ಪ್ರೌಢಶಾಲೆಗಳ 250ಕ್ಕೂ ಹೆಚ್ಚು ಮಕ್ಕಳಿಗೆ 11 ಹೆಸರಾಂತ ನಿರ್ದೇಶಕರಿಂದ ಈ ನಾಟಕಗಳು ನಿರ್ದೇಶಿಸಲ್ಪಟ್ಟಿವೆ. ಈ ಬಗ್ಗೆ ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿದರು.

ನಾಟಕೋತ್ಸವವನ್ನು ಡಿ. 29ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಉದ್ಘಾಟಿಸುವರು. ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಭುವನೇಂದ್ರ ಕಿದಿಯೂರು, ಹರಿಪ್ರಸಾದ್ ರೈ, ಎಂಜಿಎo ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎಂ. ವಿಶ್ವನಾಥ ಪೈ, ರಂಗಶಿಕ್ಷಣ ಸಂಚಾಲಕ ವಿದ್ಯಾವಂತ ಆಚಾರ್ಯ ಉಪಸ್ಥಿತರಿರುವರು.ಸಮಾರೋಪ ಡಿ.30ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದ್ದು, ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ಸಮಾರೋಪ ಭಾಷಣ ಮಾಡುವರು. ಉದ್ಯಮಿಗಳಾದ ಜಮಾಲುದ್ದೀನ್ ಅಬ್ಬಾಸ್, ಲಯನ್ಸ್ ಜಿಲ್ಲೆ 275ಎಸ್‌ರ ಜಿಲ್ಲಾ ಗವರ್ನರ್ ಅಲೈ ಸುನೀಲ್ ಸಾಲ್ಯಾನ್, ಉದ್ಯಮಿ ಪೆರ್ಣಂಕಿಲ ಶ್ರೀಶ ನಾಯಕ್, ಎಂಜಿಎo ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವನಿತಾ ಮಯ್ಯ ಹಾಗೂ ರಂಗಶಿಕ್ಷಣ ಸಂಚಾಲಕ ವಿದ್ಯಾವಂತ ಆಚಾರ್ಯ ಉಪಸ್ಥಿತರಿರುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಂಗಭೂಮಿಯ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ಉಪಸ್ಥಿತರಿದ್ದರು.