ಜೀವನದಲ್ಲಿ ಗುರಿ ಮುಟ್ಟುವ ಕನಸು ಮುಖ್ಯ

| Published : Aug 07 2024, 01:31 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ವಿದ್ಯಾರ್ಥಿಗಳು ವ್ಯಾಸಂಗದ ಜೊತೆ ಜೊತೆಗೆ ಜೀವನದಲ್ಲಿ ಉತ್ತಮ ಗುರಿಮಟ್ಟುವ ಕನಸು ಕಾಣುವ ಮೂಲಕ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿಶ್ರಾಂತ ದೈಹಿಕ ಶಿಕ್ಷಣದ ನಿರ್ದೇಶಕರು ಹಾಗೂ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತರಾದ ಡಾ.ಅಶೋಕಕುಮಾರ ಜಾಧವ ಹೇಳಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ವಿದ್ಯಾರ್ಥಿಗಳು ವ್ಯಾಸಂಗದ ಜೊತೆ ಜೊತೆಗೆ ಜೀವನದಲ್ಲಿ ಉತ್ತಮ ಗುರಿಮಟ್ಟುವ ಕನಸು ಕಾಣುವ ಮೂಲಕ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿಶ್ರಾಂತ ದೈಹಿಕ ಶಿಕ್ಷಣದ ನಿರ್ದೇಶಕರು ಹಾಗೂ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತರಾದ ಡಾ.ಅಶೋಕಕುಮಾರ ಜಾಧವ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಮಂಗಳವಾರ ನಡೆದ 2023-24ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ಪದವಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು. ಸುಮಾರು ಮೂರು ದಶಕಗಳ ಸುದಿರ್ಘ ಸೇವೆಗೈದು ತೃಪ್ತಿಯಿಂದ ನಿವೃತ್ತಿಯಾಗಿದ್ದೇನೆ. ಕಾಲೇಜಿನಲ್ಲಿ ನನಗೆ ಸಿಕ್ಕ ಕೆಲ ವರ್ಷಗಳ ಸೇವೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದರೂ ಶಾಸಕರು, ಪ್ರಾಂಶುಪಾಲರು, ಸಹ ಮಿತ್ರರು, ಪಟ್ಟಣದ ಪ್ರಮುಖರು ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ರಾಜ್ಯಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ. ಕಾಲೇಜಿನಲ್ಲಿ ಹಲವಾರು ವಿದ್ಯಾರ್ಥಿಗಳು ಯುನಿವರ್ಸಿಟಿ ಬ್ಲೂ ಆಗಿದ್ದಾರೆ. ಕಾಲೇಜಿನ ಸಹಭಾಗಿತ್ವದಲ್ಲಿ ಜಿಲ್ಲಾ ಕೇಂದ್ರದಲ್ಲಿ ಏರ್ಪಡಿಸಿದ್ದ ಬೃಹತ್ ಮೇಘಾ ಕ್ರೀಡಾಕೂಟ ಹಾಗೂ 20 ಕಿ.ಮೀ ಮ್ಯಾರಥಾನ್ ಕ್ರೀಡಾಕೂಟದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಸಾಧನೆ ಮಾಡಿದ್ದು ಇತಿಹಾಸದಲ್ಲಿ ಉಳಿದಿದೆ. ವಿದ್ಯಾರ್ಥಿಗಳ ಶಿಸ್ತು ಮತ್ತು ಪ್ರಾಮಾಣಿಕತೆ ಭವಿಷ್ಯದ ಜೀವನಕ್ಕೆ ದಾರಿ ದೀಪವಾಗಲಿ, ಕಾಲೇಜಿನಲ್ಲಿ ಪಡೆದ ಪುರಸ್ಕಾರ ಮುಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಿಮ್ಮ ಭವಿಷ್ಯ ಉಜ್ವಲ ಬೆಳಕು ಕಾಣಲಿ ಎಂದು ಹಾರೈಸಿದರು.ವಿಶ್ರಾಂತ ಪ್ರಾಧ್ಯಾಪಕ ಎಸ್.ಎನ್.ಬಸವರಡ್ಡಿ ವಿದ್ಯಾರ್ಥಿಗಳ ಕುರಿತು ಮಾತನಾಡಿ, ಮೊಬೈಲ್ ಗಿಳಿನಿಂದ ಹೊರಬಂದು ಓದುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಸತತ ಪ್ರಯತ್ನ, ಸಮಯ ಪಾಲನೆ, ಪ್ರಾಮಾಣಿಕತೆ ರೂಢಿಸಿಕೊಂಡರೆ ಯಶಸ್ಸು ನಿಮ್ಮ ಪಾಲಾಗುತ್ತದೆ ಎಂದು ಹೇಳಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಅಶೋಕ ಹೆಗಡೆ ಅವರು ಮಾತನಾಡಿ, ವಿದ್ಯಾರ್ಥಿಗಳು ಬುದ್ಧಿವಂತಿಕೆ ಹಾಗೂ ಕೌಶಲ್ಯವನ್ನು ಹೆಚ್ಚಿಸಿಕೊಂಡು ಜೀವನದ ಹಾದಿಯಲ್ಲಿ ಸಾಗಬೇಕು. ನಿಮ್ಮ ಬೆಳವಣಿಗೆಗೆ ಪೋಷಕರ ಹಾಗೂ ಗುರುಗಳ ಸಹಕಾರ ಸದಾ ಇರುತ್ತದೆ. ಹಾಗಾಗಿ ಅವರಿಗೆ ಋುಣಿಯಾಗಿರುವುದು ಎಲ್ಲರ ಕರ್ತವ್ಯ. ನಿಮ್ಮ ಮುಂದಿನ ಭವಿಷ್ಯ ಉತ್ತಮವಾಗಿರಲಿ ಎಂದು ಆಶಿಸಿದರು.ಕ್ರೀಡಾ ವಿಭಾಗದ ಸಂಚಾಲಕ ಪ್ರೊ.ಎಸ್.ಬಿ.ಜಾಲವಾದಿ ಪ್ರಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ವಿಭಾಗ ಸಂಚಾಲಕಿ ಪ್ರೊ.ಪ್ರೇಮ ಕುಮಾರಿ.ಪಿ, ರೆಡ್ ಕ್ರಾಸ್ ಘಟಕದ ಸಂಚಾಲಕಿ ಡಾ.ದ್ರಾಕ್ಷಾಯಣಮ್ಮ.ಎನ್‌.ಪಿ, ಎನ್ಎಸ್ಎಸ್ ಘಟಕದ ಸಂಚಾಲಕ ಪ್ರೊ.ಅಕ್ರಂ ಪಾಷಾ, ಪತ್ರಾಂಕಿತ ವ್ಯವಸ್ಥಾಪಕಿ ಪದ್ಮಜಾ ಬೆಳ್ಳಿಕಟ್ಟಿ, ಕಾಲೇಜಿನ ಅಧಿಕ್ಷಕರಾದ ಜಗನ್ನಾಥ ಸಜ್ಜನ, ಪ್ರೊ.ಬಿ.ಎಸ್.ಬಿರಾದಾರ, ಎಸ್.ಎಸ್.ಗೌಡರ, ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದ ಪಿ.ಸಿ.ತಳಕೇರಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಬಹುಮಾನ ವಿತರಣೆ ಕಾರ್ಯಕ್ರಮವನ್ನು ಡಾ. ಬಸವರಾಜ ಹೊನಮಟ್ಟಿ ನಡೆಸಿಕೊಟ್ಟರು.ಕಾರ್ಯಕ್ರಮದ ನಿರೂಪಣೆ ಡಾ.ಎಂ.ಎಸ್. ಶಿವಶರಣ,ಡಾ.ಜೋತಿ ಹೂಗಾರ ಸ್ವಾಗತಿಸಿ,ವಂದಿಸಿದರು.